ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ

ಕುಂದಾಪುರ: ಡಿಸೆಂಬರ್‌ 29ರ ಬೆಳಗಿನ ಜಾವ ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ವರದಿಯಾಗಿದೆ.

ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡ ಮಾಹಿತಿ ಇದ್ದು, ಬಳಿಕ ಅದು ಪುಸ್ತಕದಂಗಡಿ ಸೇರಿದಂತೆ ಐರಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ ಎನ್ನಲಾಗಿದೆ.

ಇದನ್ನೂ ಓದಿ: ಮುಂಡಗೋಡ | ಟಿಬೇಟಿಯನ್ ಧರ್ಮಗುರು ದಲೈಲಾಮಾ ಅವರನ್ನು ಕಂಡು ಬಹಳ ಸಂತಸವಾಗಿದೆ – ಕಿರಣ್‌ ರಿಜಿಜು

ಸೋಮವಾರ ಮುಂಜಾನೆ 3 ಗಂಟೆಗೆ ಘಟನೆ ನಡೆದಿದ್ದು, ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಸಹಕರಿಸುತ್ತಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ನಾಶವಾಗಿವೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ನೋಡಿ: ಚಿತ್ರದುರ್ಗ | ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ Janashakthi Media

Donate Janashakthi Media

Leave a Reply

Your email address will not be published. Required fields are marked *