ನರೇಗಾ ಹೆಸರು ಬದಲಾವಣೆ ಖಂಡಿಸಿ ಜ.5ರಂದು ಬೃಹತ್‌ ಪ್ರತಿಭಟನೆ: ಸಲೀಂ ಅಹ್ಮದ್

ಹುಬ್ಬಳ್ಳಿ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ನರೇಗಾ) ಹೆಸರು ಬದಲಿಸಿದ ಕೇಂದ್ರ ಸರ್ಕಾರದ ನೀತಿ ಖಂಡಿಸಿ, ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ, ಜ.5ರಂದು ದೇಶದಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಲಾಗುವುದು’ ಎಂದು ಡಿಸೆಂಬರ್‌ 28ರಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

‘ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರವು ಯೋಜನೆಯಲ್ಲಿರುವ ಗಾಂಧಿ ಹೆಸರನ್ನು ತೆಗೆದು ರಾಜಕೀಯ ಮಾಡಲು ಮುಂದಾಗಿದೆ’ ಎಂದು ಆರೋಪಿಸಿದರು.

ಇದನ್ನೂ ಓದಿ: ನವದೆಹಲಿ | ಡಿ. 31 ರಂದು ಮುಷ್ಕರಕ್ಕೆ ಕರೆ ನೀಡಿದ ಗಿಗ್‌ ಕೆಲಸಗಾರು

‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದೂರದೃಷ್ಟಿ ಇಟ್ಟುಕೊಂಡು ನರೇಗಾ ಯೋಜನೆ ಜಾರಿಗೆ ತಂದಿತ್ತು. ಆರ್ಥಿಕವಾಗಿ ಹಿಂದುಳಿದವರಿಗೆ ಸಾಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕು ನೀಡಿತ್ತು. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅದರಲ್ಲಿನ ಅನುದಾನದ ಪಾಲನ್ನು 60:40 ಹಂಚಿಕೆ ಮಾಡಿ, ರಾಜ್ಯ ಸರ್ಕಾರದ ಮೇಲೆ ಹೆಚ್ಚು ಹೊರೆ ಹಾಕುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ನೋಡಿ: ಏನಿದು ಪರ್ಯಾಯ ರಾಜಕಾರಣ? ರಾಜ್ಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ ಸಿಪಿಐ(ಎಂ) Janashakthi Media

Donate Janashakthi Media

Leave a Reply

Your email address will not be published. Required fields are marked *