‘ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ನಿಧನ, ಆತ್ಮಹತ್ಯೆ ಶಂಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಮಠ’, ‘ಎದ್ದೇಳು ಮಂಜುನಾಥ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿ ಎಲ್ಲರ ಗಮನಸೆಳೆದಿದ್ದ ನಿರ್ದೇಶಕ ಗುರುಪ್ರಸಾದ್ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳ ಹಿಂದೆ ಮಾದನಾಯಕನಹಳ್ಳಿಯಲ್ಲಿ ಇರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ (ನ.4) ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ʼಫ್ಯಾಸಿಸಂʼ ವಿರೋಧಿ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಸಭಾ ಸಂಸದನಿಗೆ ಅನುಮತಿ ನಿರಾಕರಿಸಿದ ಮೋದಿ ಸರಕಾರ

ಮಠ ಹಾಗೂ ಎದ್ದೇಳು ಮಂಜುನಾಥ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕನ್ನಡದಲ್ಲಿ 5 ಸಿನಿಮಾಗಳನ್ನು ಗುರುಪ್ರಸಾದ್ ನಿರ್ದೇಶನ ಮಾಡಿದ್ದರು.

ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಟಾಟಾ ನ್ಯೂ ಹಾವೆಲ್ ಅಪಾರ್ಟ್​ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿಂದಲೂ ಗುರುಪ್ರಸಾದ್ ವಾಸವಿದ್ದರು, ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಬಗ್ಗಿ ನೋಡಿದಾಗ ಗುರುಪ್ರಸಾದ್ ಶವ ಫ್ಯಾನಿಗೆ ನೇತಾಡುತ್ತಿರುವುದು ಕಂಡಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಪೊಲೀಸರು.

ರಿಯಾಲಿಟಿ ಶೋ ಕಾರ್ಯಕ್ರಮದಲ್ಲೂ ಗುರುಪ್ರಸಾದ್​ ಭಾಗವಹಿಸುತ್ತಿದ್ದರು. ಆದರೀಗ ಗುರುಪ್ರಸಾದ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 10 ದಿನಗಳ ಹಿಂದೆಯೇ ಸೂಸೈಡ್ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನು ಇವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಇದನ್ನೂ ನೋಡಿ: ಸ್ವತಂತ್ರ ಡಿಜಿಟಲ್ ಮಾಧ್ಯಮದ ಮುಂದಿರುವ ಸವಾಲುಗಳು” – ನವೀನ್ ಸೂರಿಂಜೆ ಮಾತುಗಳು Janashakthi Media

Donate Janashakthi Media

Leave a Reply

Your email address will not be published. Required fields are marked *