ಮಂಗಳೂರು: ಕೆಲ ದಿನಗಳಿಂದ ತಣ್ಣಗಿದ್ದ ಹಿಜಾಬ್-ಕೇಸರಿ ಶಾಲು ವಿವಾದ ಮತ್ತೆ ಶುರವಾಗಿದೆ. ಪರೀಕ್ಷೆಗಳು ಮುಗಿದ ಬಳಿಕ ಮತ್ತೆ ವಿವಾದವನ್ನು ಹುಟ್ಟು ಹಾಕುತ್ತಿರುವ ಕೆಲವು ಮಂದಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಮುಂಭಾಗ ಕೇಸರಿ ಶಾಲು ಹಾಕಲು ಅವಕಾಶ ನೀಡಬೇಕೆಂದು ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಹೈಕೋರ್ಟ್ ತೀರ್ಪು ಬಳಿಕ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಶುರುವಾಗಿದೆ. ಮಂಗಳೂರಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪದವಿ ತರಗತಿಯ ಕೆಲ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಲಾಗುತ್ತಿದೆ.
Karnataka | Students of University College, Mangalore protest against the college administration for not implementing the Hijab rule. pic.twitter.com/kPSCM6gfqP
— ANI (@ANI) May 26, 2022
ಹಿಜಾಬ್-ಕೇಸರಿ ಶಾಲು ವಿವಾದವನ್ನು ಶುರು ಮಾಡಿರುವ ಕೆಲವರು ಇತ್ತೀಚಿಗೆ ಕಾಲೇಜು ಆಡಳಿತ ಮಂಡಳಿಯು ಹಿಜಾಬ್ ಹಾಕಬಾರದೆಂದು ನಿರ್ಧರ ಕೈಗೊಂಡಿತು. ಆದರೆ ಕೆಲ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಅವಕಾಶ ನೀಡಿದ್ದಾರೆ ಎಂದು ಕೆಲ ವಿದ್ಯಾರ್ಥಿಗಳು ಆರೋಪಿಸಿ ತಮಗೂ ಕೇಸರಿ ಶಾಲು ಹಾಕಿಕೊಳ್ಳಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.