ಬೆಂಗಳೂರು-ಮುಂಬೈ ಹೈಸ್ಪೀಡ್ : ರೈಲು ಕಾರಿಡಾರ್ ಸ್ಥಾಪನೆ ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗೆ ಎಂಬಿ ಪಾಟೀಲ್ ಮನವಿ

ಬೆಂಗಳೂರು : ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಸ್ಥಾಪನೆಗೆ ಸಂಬಂಧಿಸಿದಂತೆ ತಾತ್ವಿಕ ಅನುಮೋದನೆ ಸಿಗುವ ಎಲ್ಲ ಲಕ್ಷಣಗಳು ದೊರೆತಿವೆ. ಕೇಂದ್ರ ಸರ್ಕಾರ ಇತ್ತೀಚೆಗೆ ಬೆಂಗಳೂರು ಮಹಾನಗರದಿಂದ ಹೈದರಾಬಾದ್, ಚೆನ್ನೈ ಮಾರ್ಗವಾಗಿ ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಿಸಿದೆ. ಇದರಿಂದ ಬೆಂಗಳೂರಿಗೆ ಒಂದಷ್ಟು ಅನುಕೂಲ ಆಗಲಿದೆ. ಇವು ಸೇರಿದಂತೆ ಕರ್ನಾಟಕದ ಕೆಲ ರೈಲು ಯೋಜನೆಗಳ ಬಗ್ಗೆ ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಮತ್ತು ಪ್ರಹ್ಲದ್ ಜೋಶಿಯವರ ಮನವಿ ಬೆನ್ನಲ್ಲೆ ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಶನಿವಾರ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರೊಂದಿಗೆ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಪ್ರಮುಖ ಯೋಜನೆ ಬಗ್ಗೆ ಅವರು ಮನವಿ ಮಾಡಿದ್ದಾರೆ. ಅದರಲ್ಲಿ ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲು ಕಾರ್ಯಾಚರಣೆಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ನಮ್ಮ ಮೆಟ್ರೋ ಪ್ರಯಾಣ ದರ ಶೇ.5 ರಷ್ಟು ಹೆಚ್ಚಳ ; ಸಿ.ಪಿ.ಐ(ಎಂ) ಖಂಡನೆ

ಈಗಾಗಲೇ ಮುಂಬೈ-ಪುಣೆ ನಡುವೆ ಘೋಷಿಸಿರುವ ಹೈಸ್ಪೀಡ್ ರೈಲು ಕಾರಿಡಾರ್‌ ಅನ್ನು ಬೆಂಗಳೂರಿನ ತನಕ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ. ಬೆಂಗಳೂರು ದೇಶದ ತಂತ್ರಜ್ಞಾನ ರಾಜಧಾನಿಯಾಗಿದೆ. ಮುಂಬಯಿ ಆರ್ಥಿಕ ರಾಜಧಾನಿ ಆಗಿದೆ. ಇವೆರಡೂ ನಗರಗಳನ್ನು ಅತ್ಯುತ್ತಮ ಸಂಪರ್ಕ ವ್ಯವಸ್ಥೆಯಿಂದ ಬೆಸೆಯುವುದು ಅನಿವಾರ್ಯವಾಗಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಂಬಿ ಪಾಟೀಲ ತಿಳಿಸಿದ್ದಾರೆ.

ಇದರಿಂದ ಕರ್ನಾಟಕ ಅದರಲ್ಲೂ ಉತ್ತರ ಕರ್ನಾಟಕದ ಹುಬ್ಬಳ್ಳಿ, ಹಾವೇರಿ, ಬೆಳಗಾವಿ, ಗದಗ, ಬಾಗಲಕೋಟೆ ಸೇರಿದಂತೆ ಆರೇಳು ಜಿಲ್ಲೆಗಳಿಗೆ ಅನುಕೂಲ ಆಗಲಿದೆ. ಈ ಭಾಗದ ಅಭಿವೃದ್ಧಿಗೆ ಈ ಯೋಜನೆ ನಿರ್ಣಾಯಕ ಪಾತ್ರ ವಹಿಸಲಿದೆ. ಶಿಕ್ಷಣ, ವ್ಯಾಪಾರ, ಕೈಗಾರಿಕೆ, ಸಾರಿಗೆ ವಲಯಕ್ಕೆ ಉತ್ತೇಜನ ಸಿಗಲಿದೆ.

ರಾಜ್ಯ ರಾಜಧಾನಿಯಿಂದ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲು ಹಾಗೂ ಬೆಂಗಳೂರು-ವಿಜಯಪುರ ನಡುವೆ ದಿನವಹಿ ವಿಶೇಷ ರೈಲುಗಳನ್ನು ಮಂಜೂರು ಮಾಡಬೇಕೆಂದು ಕೋರಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಖುದ್ದು ಮನವಿ ಸಲ್ಲಿಸಿದೆವು. ಇದರಿಂದ ಆಗುವ ಪ್ರಯೋಜನ, ರೈಲುಗಳ ಅಗತ್ಯತೆ ಕುರಿತು ಕೇಂದ್ರ ಸಚಿವರಿಗೆ ತಿಳಿಸಲಾಯಿತು ಎಂದರು.

ಬೆಂಗಳೂರು-ವಿಜಯಪುರ ನಡುವೆ 530 ಕಿಲೋ ಮೀಟರ್ ದೂರವಿದ್ದು, ರೈಲು ಪ್ರಯಾಣಕ್ಕೆ 15-16 ಗಂಟೆ ಹಿಡಿಯುತ್ತಿದೆ. ಇದನ್ನು 10 ಗಂಟೆಗೆ ಇಳಿಸಬೇಕು. ಇದಕ್ಕಾಗಿ ಬೆಂಗಳೂರು-ಹುಬ್ಬಳ್ಳಿ ನಡುವೆ ನಿಯಮಿತ ನಿಲುಗಡೆಗಳನ್ನು ಮಾತ್ರ ಕೊಟ್ಟು, ರೈಲುಗಳನ್ನು ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಓಡಿಸಬೇಕು. ಸ್ಲೀಪರ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸಬೇಕು ಎಂಬ ಬೇಡಿಕೆಯನ್ನು ಸಹ ರೈಲ್ವೆ ಸಚಿವರ ಮುಂದೆ ಇರಿಸಿದ್ದೇನೆ. ಇದೇ ರೀತಿಯಲ್ಲಿ ದಿನವಹಿ ಆಧಾರದ ಮೇಲೆ ಇದೇ ಮಾರ್ಗದಲ್ಲಿ ವಿಶೇಷ ರೈಲನ್ನು ಓಡಿಸಬೇಕು. ಈ ಮೂರೂ ಬಗೆಯ ಸೇವೆಗಳಿಂದ ಮಧ್ಯ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಸಾಮಾಜಿಕ, ಕೈಗಾರಿಕಾ ಮತ್ತು ಆರ್ಥಿಕ ಲಾಭವಾಗಲಿದೆ ಎಂದು ಮನವಿ ಪತ್ರದ ಮೂಲಕ ಕೇಳಿಕೊಳ್ಳಲಾಗಿದೆ. ನನ್ನ ಎಲ್ಲ ಮನವಿಗಳಿಗೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಕ್ಸ್ ಮೂಲಕ ಎಂಬಿ ಪಾಟೀಲ ಅವರು ತಿಳಿಸಿದರು. ಹೈಟೆಕ್ ಹಾರ್ಡ್‌ವೇರ್ ಪಾರ್ಕ್ ಬಾಗಲೂರಿನ ಹೈಟೆಕ್ ಹಾರ್ಡ್‌ವೇರ್ ಪಾರ್ಕ್ ನಲ್ಲಿ ಜೆಟ್ ವೆರ್ಕ್ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆಗೆ ಚಾಲನೆ ನೀಡಿದ ಬಳಿಕ ಅಲ್ಲೇ ಕೆಲಹೊತ್ತು ವೈಷ್ಣವ್ ಅವರನ್ನು ಭೇಟಿಮಾಡಿ, ಮನವಿ ಪತ್ರಗಳನ್ನು ನೀಡಿದೆ. ಸಕಾರಾತ್ಮಕವಾಗಿ ಪರಿಶೀಲಿಸುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ.

ಇದನ್ನೂ ನೋಡಿ : ಫೆ.12 ಸಾರ್ವತ್ರಿಕ ಮುಷ್ಕರ – ಶ್ರಮಜೀವಿಗಳ ಘೋಷಣೆ Janashakthi Media

Donate Janashakthi Media

Leave a Reply

Your email address will not be published. Required fields are marked *