“ಹಿಂದೂಗಳು ವೋಟ್ ನಮಗೆ ಬೇಡ” ಸಿಎಂ ಸಿದ್ದರಾಮಯ್ಯ ಕುರಿತು ಸುಳ್ಳು ಸುದ್ದಿ ಹಂಚಿಕೆ

ಬೆಂಗಳೂರು: “ಹಿಂದೂಗಳು ವೋಟ್ ನಮಗೆ ಬೇಡ”  ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ ಎಂದು ಅವರ ಕುರಿತು ಸುಳ್ಳು ಸುದ್ದಿ ಹಂಚಿಕೆ ಮಾಡಲಾಗುತ್ತಿದೆ. ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಹಿಂದೂ
 “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ‌, ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ ಹೇಳಿಕೆ ರೀತಿಯ ಪೋಸ್ಟರ್ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ನಕಲಿ ಎಂಬುದು ಫ್ಯಾಕ್ಟ್‌ಚೆಕ್‌ ಮೂಲಕ ಗೊತ್ತಾಗಿದೆ.
ಈ ಕುರಿತು ಸಂಬಂಧಿತ ಕೀವರ್ಡ್‌ಗಳೊಂದಿಗೆ ಹುಡುಕಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹೇಳಿಕೆ ನೀಡಿರುವ ಕುರಿತು ಯಾವ ಪತ್ರಿಕೆಗಳಲ್ಲಿಯೂ ವರದಿಯಾಗಿಲ್ಲ. ಒಂದು ವೇಳೆ ಸಿದ್ದರಾಮಯ್ಯನವರು ಈ ರೀತಿ ಹೇಳಿಕೆ ನೀಡಿದ್ದರೆ ಅದು ಎಲ್ಲಾ ಮುಖ್ಯವಾಹಿನಿ ಮಾಧ್ಯಮಗಳಲ್ಲಿಯೂ ವ್ಯಾಪಕವಾಗಿ ವರದಿಯಾಗಬೇಕಿತ್ತು. ಆದರೆ ಅಂತಹ ಯಾವುದೇ ವರದಿಗಳು ಸಿಕ್ಕಿಲ್ಲ. ಬದಲಾಗಿ, ಬಿಜೆಪಿ ನಾಯಕರು “ಕಾಂಗ್ರೆಸ್ ಅಥವಾ ಸಿದ್ದರಾಮಯ್ಯನವರು ಹಿಂದುಗಳ ಮತ ಬೇಡ ಎನ್ನಲಿ” ಎಂದು ಸವಾಲು ಹಾಕಿರುವ ಸುದ್ದಿಗಳಷ್ಟೇ ಅಂತರ್ಜಾಲದಲ್ಲಿ ಲಭ್ಯವಾಗಿವೆ ಎನ್ನುವುದನ್ನು “ ಕನ್ನಡ ಫ್ಯಾಕ್ಟ್‌ ಚೆಕ್” ಹೇಳಿದೆ.
ಸಿಎಂ ಸ್ಪಷ್ಟನೆ : ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು
ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಬರೆದು ಕೊಂಡಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *