ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಲ್ಲಿಸಿರುವ ಸಿಇಟಿ ಅರ್ಜಿಯಲ್ಲಿ ವಿಕಲಚೇತನರ ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಮೇ 28 ರಿಂದ 30ರವರೆಗೆ ನಡೆಯಲಿದೆ.
ಅಭ್ಯರ್ಥಿಗಳು ಸೂಕ್ತ ದಿನಾಂಕ ಮತ್ತು ಸಮಯವನ್ನು ಮುಂಗಡವಾಗಿ ಕಾಯ್ದಿರಿಸಲು ಮೇ 26ರಂದು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು. ವೈದ್ಯರ ಸಮಿತಿ ವತಿಯಿಂದ ವೈದ್ಯಕೀಯ ತಪಾಸಣೆ ಮಾಡಿ ಕ್ಲೇಮ್ ಪ್ರಕಾರ ಅರ್ಹರಾಗಿದ್ದಾರೆಯೇ ಎಂಬುದನ್ನು ತೀರ್ಮಾನಿಸಲಾಗುವುದು.
ಇದನ್ನೂ ಓದಿ: ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ
ನಮೂನಿಸಿದ ನ್ಯೂನತೆಗಳ ಪ್ರಕಾರ ಅರ್ಹರಾಗಿದ್ದಾರೆಯೇ ಎಂಬುದನ್ನು ಸಮಿತಿಯೇ ತೀರ್ಮಾನಿಸಲಿದೆ. ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಸಹಿತ ತಪಾಸಣೆಗೆ ಹಾಜರಾಗುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಇದನ್ನೂ ನೋಡಿ: ಬಿಜೆಪಿ ಮುಸ್ಲಿಮರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ – ಕೆ.ಎನ್ ಉಮೇಶ್ Janashakthi Media