ವಿಜಯಪುರ: ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಹಾಗೂ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಇಲ್ಲಿ 107 ದಿನದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಹೋರಾಟಗಾರ ಟೆಂಟ್‌ನ್ನು ಗುರುವಾರ ತಡರಾತ್ರಿ ಪೊಲೀಸರು ತೆರವುಗೊಳಿಸಿದ್ದಾರೆ.
ಇನ್ನೊಂದೆಡೆ ಸಚಿವ ಎಂ.ಬಿ.ಪಾಟೀಲರ ಮನೆಗೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಿದಾಗ ತಡೆಯೊಡ್ಡಿ ವಶಕ್ಕೆ ಪಡೆದಿದ್ದ 27 ಜನರ ಪೈಕಿ, 21 ಜನರನ್ನು ಗುರುವಾರ ರಾತ್ರಿ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ : ಕೋಗಿಲು ತೆರವು ಕಾರ್ಯಾಚರಣೆ: ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ನೀಡಲು ಮಾನವ ಹಕ್ಕುಗಳ ಆಯೋಗದ ಸೂಚನೆ
ಪೊಲೀಸರಿಗೆ ಕಪಾಳಕ್ಕೆ ಹೊಡೆದ ಆರೋಪದ ಮೇಲೆ ಹುಣಶ್ಯಾಳ ಪಿ.ಬಿ.ಸಂಗನಬಸವ ಸ್ವಾಮೀಜಿ ಸೇರಿ ಹೋರಾಟಗಾರರಾದ ಅರವಿಂದ ಕುಲಕರ್ಣಿ, ಅನಿಲ ಹೊಸಮನಿ, ಭಗವಾನ್ ರೆಡ್ಡಿ, ಭೋಗೇಶ ಸೋಲಾಪುರ ಮತ್ತು ಸಿದ್ರಾಮ ಹಳ್ಳೂರ ಅವರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪ್ರಕರಣಗಳನ್ನು ದಾಖಲಿಸಿ, ವಿಜಯಪುರ ದರ್ಗಾ ಜೈಲಿಗೆ ಕಳುಹಿಸಲಾಗಿದೆ.
ಹೋರಾಟಗಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮಕ್ಕೆ ಬಂಧಿತರ ಬಿಡುಗಡೆಗೆ ಹೋರಾಟಗಾರರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಜಿಲ್ಲೆಯಾದ್ಯಂತ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್, ಎಎಪಿ, ಸಿಪಿಎಂ, ಸಿಪಿಐ ಸೇರಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಖಂಡಿಸಿದ್ದಾರೆ.
ಸ್ವಾಮೀಜಿ ಬಂಧನಕ್ಕೆ ವಿರೋಧ: ‘ಹುಣಶ್ಯಾಳದ ಸಂಗನಬಸವ ಸ್ವಾಮೀಜಿ ಮತ್ತು ಹೋರಾಟಗಾರರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು ನ್ಯಾಯಸಮ್ಮತವಲ್ಲ’ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.
ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಪುನರುಚ್ಚಿಸಿ, ಪರಿಸ್ಥಿತಿ ಶಾಂತಗೊಳಿಸಲಿ’ ‘ಪ್ರತಿಭಟನೆ ಜನರ ಮೂಲಭೂತ ಹಕ್ಕು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹಠ ಬಿಟ್ಟು ಪ್ರತಿಭಟನಕಾರರ ಜೊತೆ ಮಾತನಾಡಲಿ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ನೋಡಿ : ಮರ್ಯಾದೆಗೇಡು ಹತ್ಯೆ ತಡೆಗೆ ಪ್ರತ್ಯೇಕ ಕಾಯ್ದೆಗೆ ಸಿದ್ಧತೆ!?| ವಿಶ್ಲೇಷಣೆ : ಗುರುರಾಜ ದೇಸಾಯಿ Janashakthi Media
