ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಲಾಗಿದೆ. ಜಿಲ್ಲಾಧಿಕಾರಿ ಇಬ್ಬರು ನಕಲಿ ವೈದ್ಯರಿಗೆ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಇಬ್ಬರಿಗೂ ತಲಾ 1 ಲಕ್ಷ ರೂ. ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಭದ್ರಾವತಿ ಮೂಲದ ಶ್ರೀನಿವಾಸ್ (57) ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಮೆಡಿಕಲ್ಸ್ ಸ್ಟೋರ್ ಜೊತೆಗೆ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಾ ಜನರಿಗೆ ಚಿಕಿತ್ಸೆ ನೀಡುತ್ತಿದ್ದರು.
ಇದನ್ನೂ ಓದಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಪದಬಂಧ ಸ್ಪರ್ಧೆ ಭಾಗವಹಿಸಿ ಬಹುಮಾನ ಗೆಲ್ಲಿ
ಇವರು ಪಡೆದ ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದುಪಡಿಸಿ ದಂಡ ವಿಧಿಸಲಾಗಿದೆ. ಆದರೆ ಅಮಾನ್ಯ ಪ್ರಮಾಣ ಪತ್ರವಾಗಿರುವುದರಿಂದ ನಕಲಿ ಎಂದು ಪರಿಗಣಿಸಿ ಒಂದು ಲಕ್ಷ ರೂ ದಂಡದ ಬರೆ ಎಳೆಯಲಾಗಿದೆ.
ಇದನ್ನೂ ನೋಡಿ: ಬಿಡಿಎ ಕಾಂಪ್ಲೆಕ್ಸ್ ಖಾಸಗೀಕರಣ ಮಾಡಿದ್ರೆ ನಿಮ್ಮ ಸರ್ಕಾರ ಉಳಿಯಲ್ಲ – ಕಾಂಗ್ರೆಸ್ ಗೆ ಎಚ್ಚರಿಸಿದ ಸಿಪಿಐಎಂ ನಾಯಕ