ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಸಂಬಂದ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಹಾಗೂ ಸರ್ವಪಕ್ಷ ಸಂಸದರ ಸಭೆ ಆರಂಭವಾಗಿದೆ.
ಜಲ ಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಸೇರಿದಂತೆ ಸುಪ್ರೀಂ ಕೋರ್ಟ್ ವಕೀಲರು, ಅಧಿಕಾರಿಗಳು ಸೆ-20 ಸಭೆಯಲ್ಲಿ ಭಾಗವಹಿಸಿದ್ದಾರೆ.
ಇದನ್ನೂ ಓದಿ:ಕಾವೇರಿ ನೀರು ವಿವಾದ: ಕೇಂದ್ರ ಸರ್ಕಾರ ಮಧ್ಯೆವೇಶಿಸಬೇಕು: ಸಿಎಂ ಸಿದ್ದರಾಮಯ್ಯ
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು, ರಾಜ್ಯದ ಹಿತ ಕಾಪಾಡುವ ದೃಷ್ಟಿಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು ನಿರ್ಧಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು, ಕಾವೇರಿ ವ್ಯಾಪ್ತಿಯ ಶಾಸಕರು, ಸಚಿವರು, ಕಾನೂನು ತಂಡ ಉಪಸ್ಥಿತರಿದ್ದಾರೆ.
ರಾಜ್ಯದಲ್ಲಿ ಒಂದೆಡೆ ಬರ ಹಾಗೂ ಮತ್ತೊಂದು ಕಡೆಯಲ್ಲಿ ಜೀನನದಿಗಳಲ್ಲಿ ನೀರಿಗೆ ಅಭಾಯ ಎದುರಾಗಿದೆ. ಈ ನಡುವೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. 15 ದಿನಗಳ ಕಾಲ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರನ್ನು ಕರ್ನಾಟಕವು ತಮಿಳುನಾಡಿಗೆ ಹರಿಸಬೇಲಾಗಿದೆ.
ಸೋಮವಾರ ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬುಧವಾರ ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದೆ.
ಕೇಂದ್ರ ಸಚಿವರನ್ನು ಭೇಟಿ ಮಾಡಿದ ತಮಿಳುನಾಡು ಸಂಸದರು : ಜಲಸಂಪನ್ಮೂಲ ಸಚಿವ ದುರೈಮುರುಗನ್ ನೇತೃತ್ವದ ಸರ್ವಪಕ್ಷಗಳ ತಮಿಳುನಾಡು ಸಂಸದರ ನಿಯೋಗ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿ, ಬಾಕಿ ಇರುವ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಶೇಖಾವತ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದುರೈಮುರುಗನ್, ಕರ್ನಾಟಕವು ತಮಿಳುನಾಡಿಗೆ ನೀರು ಬಿಡುವಂತೆ ನಿರ್ದೇಶನ ನೀಡುವಂತೆ ಕೇಂದ್ರ ಸಚಿವರು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗೆ ದೃಢವಾದ ಸೂಚನೆಗಳನ್ನು ನೀಡಬೇಕೆಂದು ನಿಯೋಗ ಬಯಸಿದೆ ಎಂದು ಹೇಳಿದರು.