ಹಾಸನ : ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಯಾರೂ ಭಾಗವಹಿಸದೆ ಹಿನ್ನೆಲೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದಲಿತ ಮಹಿಳೆ ಪಂಚಾಯ್ತಿಯಲ್ಲೇ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಘಟನೆ ನಡೆದಿದೆ. ದಲಿತ ಮಹಿಳೆ ಅಧ್ಯಕ್ಷೆಯಾಗುವ ಕಾರಣಕ್ಕೆ ಸದಸ್ಯರು ತನ್ನನ್ನು ಬೆಂಬಲಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
6 ಮಂದಿ ಗ್ರಾಮ ಪಂಚಾಯತಿ ಸದಸ್ಯರನ್ನು ಹೊಂದಿರುವ ಹೊಂಗಡಹಳ್ಳ ಗ್ರಾಮ ಪಂಚಾಯತಿ. ಮುಂದಿನ ಎರಡುವರೆ ವರ್ಷ ಅವಧಿಗೆ ಅಧ್ಯಕ್ಷರ ಸ್ಥಾನ ಎಸ್ಸಿ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ ಕ್ಯಾಟಗರಿಗೆ ಮೀಸಲಾಗಿತ್ತು. ಅಧ್ಯಕ್ಷೆ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಸಿದ್ದ ಗ್ರಾಪಂ ಸದಸ್ಯ ವನಜಾಕ್ಷಿ. ಆದರೆ ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕಾದ ಒಟ್ಟು ಸದಸ್ಯರ ಪೈಕಿ ನಾಲ್ವರು ಸದಸ್ಯರು ಗೈರಾಗಿದ್ದರು. ಇದರಿಂದ ಕೋರಂ ಕೊರತೆಯಿಂದ ಅಧ್ಯಕ್ಷ ಸ್ಥಾನದ ಘೋಷಣೆ ಸಾಧ್ಯವಾಗದೆ ಫೆ.12ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಗುಂಡಿಟ್ಟು ಕೊಲ್ಲಿ ಹೇಳಿಕೆ : ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲು
ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿಯಾಗಿ ಬಾಚಿಹಳ್ಳಿ ಗ್ರಾಮದಿಂದ ಸದಸ್ಯೆಯಾಗಿ ಆಯ್ಕೆಯಾಗಿದ್ದ ವನಜಾಕ್ಷಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು. ಈ ಹಿಂದೆ ಬೇರೆ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರಾಗಿ ಆಯ್ಕೆಯಾಗುವಾಗ ನಾನು ಹಾಜರಿದ್ದು ಮತ ಚಲಾವಣೆ ಮಾಡಿದ್ದೇನೆ. ಆದರೆ ಈಗ ನಾನು ಎಸ್ಸಿ ಸಮುದಾಯಕ್ಕೆ ಸೇರಿರುವ ಮಹಿಳೆ ಎಂಬ ಕಾರಣಕ್ಕೆ ಅಧ್ಯಕ್ಷರಾಗಲು ಇತರೆ ಸದಸ್ಯರು ಸಹಿಸುತ್ತಿಲ್ಲ ಹೀಗಾಗಿ ನಾಲ್ವರು ಗ್ರಾಪಂ ಸದಸ್ಯರು ಗೈರಾಗಿದ್ದಾರೆಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ವನಜಾಕ್ಷಿ ಗಂಭೀರ ಆರೋಪ ಮಾಡಿದ್ದಾರೆ.
ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ವನಜಾಕ್ಷಿ ಅರ್ಹ ಏಕೈಕ ಅಭ್ಯರ್ಥಿಯಾಗಿರುವ ಕಾರಣ ಫೆಬ್ರವರಿ 12 ರಂದು ನಡೆಯುವ ಸಭೆಯಲ್ಲಿ ಹೊಂಗಡಹಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅಧಿಕೃತವಾಗಿ ಘೋಷಣೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ವಿಡಿಯೋ ನೋಡಿ : ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ನೆನಪು : ಫೆಬ್ರವರಿ 10 ರಂದು ಸಮಾವೇಶJanashakthi Media