ಬೆಂಗಳೂರು : ಮೇ 11 ರಿಂದ 13 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ, 12 ಮತ್ತು 13 ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ 10 ರಿಂದ 13 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ಹಲವಡೆ ಗುಡುಗು ಸಹಿತ ಮಳೆಯಾಗಲಿದೆ.
ಇದನ್ನು ಓದಿ : ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ರಾತ್ರಿ ವೇಳೆ ನೀರು ನಿಂತು ಟ್ರಾಫಿಕ್ ಜಾಮ್
ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನು ನೋಡಿ : ಸರ್ಕಾರಿ ಶಾಲೆಗಳ ಬಗ್ಗೆ ಅಂಕಿತಾ ಮಾತುಗಳು Janashakthi Media