ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿದ್ಯಾಸಿರಿ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’, ‘ಶುಲ್ಕ ವಿನಾಯಿತಿ’ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ’ ಸೌಲಭ್ಯಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಯನ್ನು 31-10-2021 ಕ್ಕೆ ಕಡೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು, ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸುವಂತೆ ಪೋಷಕರು/ ವಿದ್ಯಾರ್ಥಿಗಳು/ ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿರುವು ಕಾರಣದಿಂದಾಗಿ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು 30-11-2021 ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ಅಥವಾ ಊಟ ಮತ್ತು ವಸತಿ ಸಹಾಯ ಯೋಜನೆ ಅಥವಾ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ ಇವುಗಳಲ್ಲಿ ಒಬ್ಬ ವಿದ್ಯಾರ್ಥಿಯು ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರು. ಆದರೆ ಶುಲ್ಕ ವಿನಾಯಿತಿ ಸೌಲಭ್ಯವನ್ನು ಎಲ್ಲ ಅರ್ಹ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ.

ವಿದ್ಯಾಸಿರಿ ಯೋಜನೆಯ ಸೌಲಭ್ಯವನ್ನು ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ / ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುವುದು.

ವಿದ್ಯಾರ್ಥಿಯ ತಂದೆ – ತಾಯಿ / ಪೋಷಕರ ಕುಟುಂಬದ ಒಟ್ಟು ವಾರ್ಷಿಕ ವರಮಾನ ಪ್ರವರ್ಗ-1 ವಿದ್ಯಾರ್ಥಿಗಳಿಗೆ ರೂ.2.50 ಲಕ್ಷಗಳು ಪ್ರವರ್ಗ-2A, 3A, 3B ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷದೊಳಗಿರಬೇಕು.

ಹೊಸದಾಗಿ ಅರ್ಜಿ ಸಲ್ಲಿಸುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆ / ಶುಲ್ಕ ವಿನಾಯಿತಿ / ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಒಂದೇ ಅರ್ಜಿ ಸಲ್ಲಿಸಬೇಕು.

ಸಲ್ಲಿಸಬೇಕಾದ ದಾಖಲೆಗಳು: ಆಧಾರ್ ಕಾರ್ಡ್‌, ಪ್ರವೇಶ ಪಡೆದ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿಗಳು, ಇತರೆ ದಾಖಲೆಗಳು.

ನವೀಕರಣ ವಿದ್ಯಾರ್ಥಿಗಳು 2020-21ನೇ ಸಾಲಿನಲ್ಲಿ ಸಲ್ಲಿಸಿರುವ ಅರ್ಜಿ ಸಂಖ್ಯೆಯನ್ನು ನಮೂದಿಸಿ 2021-22ನೇ ಸಾಲಿಗೆ ನವೀಕರಣ ಅರ್ಜಿಯನ್ನು ಸಲ್ಲಿಸಬೇಕು.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-11-2021
ಅರ್ಜಿ ಸಲ್ಲಿಸಲು ವೆಬ್‌ಸೈಟ್‌: www.ssp.postmatric.karnataka.gov.in
ಸಹಾಯವಾಣಿ: 8050770005/ 8050770004

Donate Janashakthi Media

Leave a Reply

Your email address will not be published. Required fields are marked *