ನವದೆಹಲಿ: ಸಾಲು ಸಾಲು ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಠಿಯಿಂದ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನವೆಂಬರ್ 30ರವರೆಗೆ ಕೊರೊನಾ ಮಾರ್ಗಸೂಚಿಗಳನ್ನು ವಿಸ್ತರಿಸಿದೆ.
“ಚಲನಚಿತ್ರ ಮಂದಿರಗಳು, ಮನರಂಜನಾ ಉದ್ಯಾನವನಗಳು ಹಾಗೂ ಕ್ರೀಡಾಪಡುಗಳಿಗೆ ಈಜುಕೊಳಗಳನ್ನು ತೆರೆಯಲು ಅವಕಾಶ ನೀಡಿದ್ದು, ನವೆಂಬರ್ 30ರವೆರೆಗೆ ನಿರ್ಬಂಧಿತ ಪ್ರದೇಶಗಳ ಹೊರಗೆ ಮಾತ್ರ ಅನ್ವಯಿಸುತ್ತದೆ” ಎಂದು ಗೃಹ ವ್ಯವಹಾರಗಳ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.
“ಈ ಹಿಂದೆ ಸೆಪ್ಟೆಂಬರ್ 30ರಂದು ಹೊರಡಿಸಲಾದ ಮಾರ್ಗಸೂಚಿಗಳು ಅಕ್ಟೋಬರ್ 31ರವರೆಗೆ ಜಾರಿಯಲ್ಲಿದ್ದವು. ಆದೇಶದ ಪ್ರಕಾರ, ಲಾಕ್‌ಡೌನ್ ಅನ್ನು ಈ ಅವಧಿಯಲ್ಲಿ ಕಟ್ಟುನಿಟ್ಟಾಗಿ ಅತ್ಯಂತ ಸೂಕ್ಷ್ಮ ನಿರ್ಬಂಧಿತ ವಲಯಗಳಲ್ಲಿ ಜಾರಗೊಳಿಸಲಾಗುವುದು. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಸಂಬಂಧಪಟ್ಟವರು ಕೊರೊನಾದ ಸೂಕ್ತ ನಡವಳಿಕೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಲು ಪ್ರಯತ್ನಿಸಬೇಕು. ಮಾಸ್ಕ್, ಸಾಮಾಜಿಕ ಅಂತರವನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು” ಎಂದು ಸಚಿವಾಲಯ ತಿಳಿಸಿದೆ.
ಸೂಕ್ಷ್ಮ ನಿರ್ಬಂಧಿತ ಸ್ಥಳಗಳಲ್ಲಿ ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಶೇ. 5ರಷ್ಟು ಪಾಸಿಟಿವಿಟಿ ದರ ಹೊಂದಿರುವ ಜಿಲ್ಲೆಗಳಲ್ಲಿ ಮಾತ್ರ ಜನ ಸೇರಲು ಅವಕಾಶ ನೀಡಬಹುದಾಗಿದೆ. ಆದರೆ ಇದಕ್ಕೆ ಪೂರ್ವಾನುಮತಿ ಅಗತ್ಯವಿದೆ ಎಂದು ಸಚಿವಾಲಯ ತಿಳಿಸಿದೆ.
ಮಿತಿಯನ್ನು ಹೇರುವ ಮೂಲಕ ಜನ ಸೇರಲು ಅವಕಾಶ ನೀಡಬಹುದಾಗಿದ್ದು, ಇಂತಹ ಸ್ಥಳಗಳಲ್ಲಿ ದೈಹಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.