ತೃತೀಯ ಭಾಷೆ ಅಂಕ ವಿವಾದ ತೀವ್ರ: ಸಿಎಂ ಜೊತೆ ಚರ್ಚೆಗೆ ಸಚಿವ ಬಂಗಾರಪ್ಪ ಮುಂದು

ಬೆಂಗಳೂರು: ತೃತೀಯ ಭಾಷೆ ಅಂಕ ವಿವಾದ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಚರ್ಚಿಸಿ ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಭಾಷೆ

ಹೈಕೋರ್ಟ್ ಏಪ್ರಿಲ್‌ 21ರಂದು ನೀಡಿದ ನಿರ್ದೇಶನದಂತೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂದು ಸೂಚಿಸಿದೆ. ಈ ತೀರ್ಪಿನ ಹಿನ್ನೆಲೆ ಸರ್ಕಾರದ ಮುಂದಿನ ನಡೆ ಏನು ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಬಂಗಾರಪ್ಪ ಅವರು, “ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನೂ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಆತಂಕಪಡಬಾರದು, ಫಲಿತಾಂಶ ಪ್ರಕಟಣೆಯಲ್ಲಿ ಯಾವುದೇ ವಿಳಂಬವಾಗುವುದಿಲ್ಲ” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಕ್ಯಾಂಪಸ್ ಡೆಮಾಕ್ರಸಿ ಉಳಿವಿಗಾಗಿ 4 ದಿನಗಳ ಎಸ್ಎಫ್ಐ ಅಧ್ಯಯನ ಶಿಬಿರ

ಇದಕ್ಕೂ ಮೊದಲು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್‌ಇಎಲ್) ಮೌಲ್ಯಮಾಪನ ವಿಧಾನದಲ್ಲಿ ಬದಲಾವಣೆ ಕುರಿತಂತೆ ಕರಡು ಅಧಿಸೂಚನೆ ಪ್ರಕಟಿಸಿ ಸಾರ್ವಜನಿಕ ಅಭಿಪ್ರಾಯವನ್ನು ಆಹ್ವಾನಿಸಿತ್ತು.

ಇದರ ಬೆನ್ನಲ್ಲೇ ಕಲಬುರಗಿ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ ನಮೋಶಿ ಅವರು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.

ಶೈಕ್ಷಣಿಕ ವರ್ಷ ಪೂರ್ಣಗೊಂಡ ನಂತರ ಮೌಲ್ಯಮಾಪನ ವಿಧಾನ ಬದಲಿಸುವುದು ವಿದ್ಯಾರ್ಥಿಗಳ ನ್ಯಾಯಸಮ್ಮತ ನಿರೀಕ್ಷೆಗೆ ಧಕ್ಕೆ ಉಂಟುಮಾಡುತ್ತದೆ. ಅಂಕಗಳನ್ನು ಗ್ರೇಡಿಂಗ್ ಆಗಿ ಬದಲಿಸುವುದು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ಅಂಬೇಡ್ಕರ್–ಮಾರ್ಕ್ಸವಾದ: ಚಿಂತನೆ ಮತ್ತು ಹೋರಾಟ | ಕೆ.ಎನ್.ಉಮೇಶ್ Janashakthi Media

Donate Janashakthi Media

Leave a Reply

Your email address will not be published. Required fields are marked *