ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಯಲ್ಲಿ ಈ ಹಿಂದೆ ಬಳಸಿರುವ ತುಪ್ಪ ಕಲಬೆರಕೆಯಿಂದ ಕೂಡಿತ್ತು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಜಾಗೃತಗೊಂಡ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತಯಾರಾಗುವ ವಿವಿಧ ಕಂಪನಿಯ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ. ನಡೆಸು
ರಾಜ್ಯದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ವಿವಿಧ ಕಂಪನಿಗಳ ತುಪ್ಪಗಳನ್ನು ಪರೀಕ್ಷೆ ನಡೆಸುವಂತೆ ಆಹಾರ ಸಚಿವ ದಿನೇಶ್ ಗುಂಡೂರಾವ್ ಆಹಾರ ಸುರಕ್ಷಿತ ಹಾಗೂ ಗುಣಮಟ್ಟ ಇಲಾಖೆಗೆ ಆದೇಶ ನೀಡಿದ್ದಾರೆ.
ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ ಪ್ರಮಾಣ ಕಡಿಮೆಯಾಗಬೇಕಿತ್ತು, ಆದರೆ ಹೆಚ್ಚಾಗುತ್ತಿವೆ: ಪ್ರೊ. ಬರಗೂರು ರಾಮಚಂದ್ರಪ್ಪ
ತ್ವರಿತವಾಗಿ ವಿವಿಧ ಕಂಪನಿಗಳ ತುಪ್ಪದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ. ವರದಿ ಬಂದ ಬಳಿಕ ಇವುಗಳಲ್ಲಿ ಕಲಬೆರಿಕೆ ಕಂಡುಬಂದಲ್ಲಿ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ರಾಜ್ಯದ ದೇವಸ್ಥಾನಗಳಲ್ಲಿ ತುಪ್ಪದಿಂದ ತಯಾರಾಗುವ ಪ್ರಸಾದಗಳ ಮಾದರಿಯನ್ನೂ ಆಹಾರ ಇಲಾಖೆ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ತಯಾರಿ ನಡೆಸಿದೆ.
ಇದನ್ನೂ ನೋಡಿ: ನಾಗಮಂಗಲ ಮತೀಯ ಗಲಭೆ- ಮುಂದುವರಿದ ನೂರು ವರ್ಷಗಳ ರಕ್ತಚರಿತ್ರೆ. Janashakthi Media