ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಕೆ ಎನ್‌ ರಾಜಣ್ಣ

ಮೈಸೂರು: ಮಾಧ್ಯಮಗಳ ಜೊತೆ ಮಾತನಾಡಿದ ಸಹಕಾರ ಸಚಿವ ಕೆಎನ್‌ ರಾಜಣ್ಣ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ರಾಜಕೀಯ

“ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂಬೈ| ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ; 8 ಮಂದಿ ಸಾವು

ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳುತ್ತೇವೆ. ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಸಹಕಾರ ಕ್ಷೇತ್ರದ ಕಾಯ್ದೆಗೆ ತಿದ್ದುಪಡಿಗಾಗಿ ಕೇಂದ್ರಕ್ಕೆ ಕಳುಹಿಸುವ ಅವಶ್ಯಕತೆಯಿಲ್ಲ. ಆದರೆ ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ನೋಡಿ: ಬಿಡದಿ : ಮೂಕ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ Janashakthi Media

Donate Janashakthi Media

Leave a Reply

Your email address will not be published. Required fields are marked *