ಧಾರವಾಡ: ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರಿಶೀಲನೆ ನಡೆಸಿದರು.
ಆಗಸ್ಟ್-16 ರಂದು ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸರಿಯಾದ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂಬ ಬಗ್ಗೆ ಕೆಲ ರೋಗಿಗಳು ಸಲ್ಲಿಸಿದ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ರೋಗಿಗಳ ತಪಾಸಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ, ಕೂಡಲೇ ಅಲ್ಲಿನ ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳಿಗೆ ಈ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:ಬಳ್ಳಾರಿಯ ಸರಕಾರಿ ಭೂಮಿ ರಾಜಕಾರಣಿಗಳ ಪಾಲು?! – ಇದರಲ್ಲಿ ಸಂತೋಷ್ ಲಾಡ್ ಪಾಲು ಬಹುಪಾಲು
ಈ ವಿಷಯದಲ್ಲಿ ಇನ್ನುಮುಂದೆ ಯಾವುದೇ ದೂರುಗಳು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದೇನೆ. ಆಸ್ಪತ್ರೆಯ ಸುಧಾರಣೆಗೂ ಅಗತ್ಯ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳುತ್ತೇನೆ ಎಂದರು.
ಧಾರವಾಡದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಪರಿಶೀಲನೆ ನಡೆಸಲಾಯಿತು.
ಭೇಟಿ ವೇಳೆ, ಸರಿಯಾದ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂಬ ಬಗ್ಗೆ ಕೆಲ ರೋಗಿಗಳು ಸಲ್ಲಿಸಿದ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೂಡಲೇ ಅಲ್ಲಿನ ವೈದ್ಯಾಧಿಕಾರಿಗಳಿಗೆ ಈ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದೇನೆ.
ಈ ವಿಷಯದಲ್ಲಿ ಇನ್ನುಮುಂದೆ… pic.twitter.com/hB9Aabfcf1
— Santosh Lad Official (@SantoshSLadINC) August 16, 2023