ಕಾವೇರಿ ನೀರು ಹಂಚಿಕೆ:ಕೇಂದ್ರ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ-ಸಿಎಂ ಸಿದ್ದರಾಮಯ್ಯ

ನವದೆಹಲಿ: ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ ಅವರು ಜಂಟಿ ಪತಿಕಾಗೋಷ್ಠಿಯಲ್ಲಿ ವಿವರಿಸಿದರು.ಕಾವೇರಿ 

ಇದನ್ನೂ ಓದಿ:ಕಾವೇರಿ ನದಿ ನೀರು ಹಂಚಿಕೆ: ಸಿಎಂ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರ, ಸಂಸದರ ಸಭೆ

ಸೆ-21ರಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗವು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಎದುರಿಸುತ್ತಿರುವ ಸಂಕಷ್ಟ ಸ್ಥಿತಿ ಬಗ್ಗೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು ಸಂಸದರೊಂದಿಗೆ ಚರ್ಚಿಸಿದ್ದಾರೆ.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು. ಸುಪ್ರೀಂ ಕೋರ್ಟ್‌ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸುಪ್ರೀಂ ಕೋರ್ಟ್‌ ನಮ್ಮ ಮನವಿಯನ್ನು ಪುರಸ್ಕರಿಸಿ CWMC ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ. ಹೀಗಾಗಿ ನಾವು ಸುಪ್ರೀಂಕೋರ್ಟ್‌ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ವಿವರಿಸಿದರು.

ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕು ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದರು.

ಗೋಷ್ಠಿಯಲ್ಲಿ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌,ಕೃಷಿ ಸಚಿವ ಚಲುವರಾಯಸ್ವಾಮಿ,ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ,ಪ್ರಕಾಶ್‌ ಹುಕ್ಕೇರಿ,ಸಂಸದ ಡಿ.ಕೆ.ಸುರೇಶ್‌ ಮುಂತಾದವರು ಉಪಸ್ಥಿತರಿದ್ದರು.

ಗೋಷ್ಠಿಯಲ್ಲಿನ ಮುಖ್ಯಾಂಶಗಳು:

  • ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ. ಆದರೆ ನಮ್ಮ ನಾಲ್ಕು ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.
  • 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್‌ ಮತ್ತು ಸೆಪ್ಟೆಂಬರ್‌ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನಕ್ಕೆ ತಂದಿದ್ದೇವೆ.
  • ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ನೀರು ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದು ಹೇಳಿದ್ದೇವೆ.
  • ಸುಪ್ರೀಂಕೋರ್ಟ್‌ಗೂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ಲೀಗಲ್‌ ತಂಡ ಮನವರಿಕೆ ಮಾಡಿಸಲು ಯತ್ನಿಸುತ್ತಿದೆ.
  • ನಾಲ್ಕು ಜಲಾಶಯಗಳ ಒಳ ಹರಿವು 11ರಿಂದ 8 ಕ್ಯೂಸೆಕ್ಸ್‌ಗೆ ಇಳಿದಿದೆ.

ವಿಡಿಯೋ ನೋಡಿ:ಬಹುಮನಿ ಸುಲ್ತಾನರ ಕಾಲದ ಸುರಂಗ ಬಾವಿ (ವಾಟರ್ ಕರೇಜ್‌) ಬೀದರ್ನಲ್ಲಿದೆ ಅಚ್ಚರಿಯ ಇತಿಹಾಸ Janashakthi Media

Donate Janashakthi Media

Leave a Reply

Your email address will not be published. Required fields are marked *