ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ

ಬೆಂಗಳೂರು : ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಬದಲಾವಣೆಗೆ ಒತ್ತಾಯಿಸಿ ಹೋರಾಟಗಳನ್ನು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.

ಈ ಕುರಿತು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಟ್ವಿಟರ್ ಮೂಲಕ ಮಾಹಿತಿ ನೀಡಿದೆ. ಈ ಸಮತಿಗೆ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿಯವರನ್ನ ಅಧ್ಯಕ್ಷರನ್ನಾಗಿ ನೇಮಿಸಿದ್ದು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಮತ್ತು ಮೈಸೂರು ಮಹಾರಾಣಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಿ.ವಿ. ವಸಂತಕುಮಾರ್ ಅವರನ್ನ ಸದಸ್ಯರನ್ನಾಗಿಸಿದೆ.

ಸಚಿವ ಸಂಪುಟದ ತೀರ್ಮಾನದಂತೆ ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕ, ಕಾನೂನಾತ್ಮಕವಾಗಿ ಚೌಕಟ್ಟಿನಲ್ಲಿ ಪರೀಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಬದಲಾವಣೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.ಇತ್ತ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ಬೇಡಿಕೆಯಿಟ್ಟು ನಗರದ ಫ್ರೀಡಂ ಪಾರ್ಕ್​ನಲ್ಲಿ ಸುದೀರ್ಘ ಧರಣಿ ನಡೆಸುವ ಮೂಲಕ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಿದೆ. ಮಾರ್ಚ್ 15 ರಂದು ಬಲಿಷ್ಠ ಹೋರಾಟ ನಡೆಸಲು ಸಿದ್ಧತೆಯನ್ನು ನಡೆಸಿದೆ.

ಈಗಾಗಲೇ ವಾಲ್ಮೀಕಿ ಸಮುದಾಯ ಮೀಸಲಾತಿ ಹೆಚ್ಚಿಸಬೇಕು ಎಂದು ಸರಕಾರ ಪ್ರಸ್ತಾಪವನ್ನು ಸಲ್ಲಿಸಿದೆ. ಇತ್ತ ಈಶ್ವರಪ್ಪ ನೇತೃತ್ವದಲ್ಲಿ ಕುರುಬ ಸಮುದಾಯ ಎಸ್‌ಟಿ ಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ.

Donate Janashakthi Media

Leave a Reply

Your email address will not be published. Required fields are marked *