ರಸ್ತೆಯಲ್ಲಿ ನಿಂತು ಮಾತನಾಡಿದ್ದಕ್ಕೆ ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ಕನಕಪುರ: ದಲಿತ ಸಮುದಾಯದ ಯುವಕರಿಬ್ಬರು ರಸ್ತೆಯಲ್ಲಿ ಮಾತನಾಡುತ್ತಾ ನಿಂತಿದ್ದನ್ನು ಪ್ರಶ್ನಿಸಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಜುಲೈ 21 ರಾತ್ರಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ ಹಾಕಿದ್ದಾರೆ. ರಸ್ತೆ

ಕನಕಪುರ ತಾಲ್ಲೂಕಿನ ಮಾಳಗಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಅನೀಶ್‌ ಎಡಗೈ ತುಂಡಾಗಿದ್ದು ಬೆಂಗಳೂರಿನ ಸೇಂಟ್ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಮಾವ, ಪಿಎಲ್‌ಡಿ ಬ್ಯಾಂಕ್ ಉದ್ಯೋಗಿ ಲಕ್ಷ್ಮಣ್ ಹಾಗೂ ಗೋವಿಂದರಾಜು ಕನಕಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯರು ಸೇರಿದಂತೆ ಏಳು ಮಂದಿ ಮೇಲೆ ಗುಂಪು ಹಲ್ಲೆ ನಡೆಸಿದೆ. ಮನೆ ಮುಂದೆ ನಿಲ್ಲಿಸಿದ್ದ ಎರಡು ಆಟೊಗಳನ್ನು ಜಖಂಗೊಳಿಸಿದೆ.

ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆರ್‌ಎಸ್‌ಎಸ್‌ ಸಭೆ; ಜಾಗೃತ ನಾಗರಿಕರು ಕರ್ನಾಟಕ ಸಂಘಟನೆ ಆರೋಪ

ಒಕ್ಕಲಿಗ ಸಮುದಾಯದ ಹರ್ಷ ಅಲಿಯಾಸ್ ಕೈಮ, ಕರುಣೇಶ, ರಾಹುಲ್, ಶಿವ, ಶಶಾಂಕ, ಸುಬ್ಬ, ದರ್ಶನ್ ಹಾಗೂ ಇತರರ ವಿರುದ್ಧ ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಕೊಲೆ ಯತ್ನ ಆರೋಪದಡಿ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆ

ಆದರೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲೊನಿ ನಿವಾಸಿಗಳು ಹಾಗೂ ಪರಿಶಿಷ್ಟ ಸಮುದಾಯದ ಕುಟುಂಬಗಳು ಈ ಹಲ್ಲೆಯಿಂದಾಗಿ ಆತಂಕದಲ್ಲಿವೆ. ನಗರಸಭೆಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಬಳಿ ತೆರಳಿದ ದಲಿತ ಮುಖಂಡರು ‘ದಲಿತರಿಗೆ ರಕ್ಷಣೆ ಕೊಡಿ’ ಎಂದು ಮನವಿ ಮಾಡಿದರು.

ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆ ಎದುರು ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ಸ್ದಳದಲ್ಲೇ ಪೊಲೀಸರಿಗೆ ಕರೆ ಮಾಡಿದ ಜಿಲ್ಲಾಧಿಕಾರಿ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು.

ಇದನ್ನೂ ನೋಡಿ: ಸಕ್ಕರೆ ಕಾಯಿಲೆ : ಮಾತ್ರೆ ಇಲ್ಲದೆ ನಿಯಂತ್ರಣ ಮಾಡಿಕೊಳ್ಳಬಹುದೆ? – ಡಾ. ಅನೀಲ್ ಕುಮಾರ್ Janashakthi Media

Donate Janashakthi Media

Leave a Reply

Your email address will not be published. Required fields are marked *