ಮೈಸೂರು: ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ ಘಟನೆ ತಾಲ್ಲೂಕಿನ ವಾಜಮಂಗಲದಲ್ಲಿ ನಡೆದಿದೆ
ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಗೆ ಶುಭಾಶಯ ತಿಳಿಸುವ ನಾಮಫಲಕವನ್ನು ಅಳವಡಿಸಲಾಗಿದ್ದೂ, ಅದರಲ್ಲಿರುವ ಅಂಬೇಡ್ಕರ್ ಚಿತ್ರವನ್ನು ಹರಿದು ಹಾಕಲಾಗಿದೆ.
ಇದನ್ನೂ ಓದಿ: ಆದಷ್ಟು ಬೇಗ ರೋಹಿತ್ ವೇಮುಲ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ
ಇನ್ನೊಂದು ಕಡೆ ಸಿದ್ದಾರ್ಥ ಯುವಕ ಮಂಡಲದ ನಾಮಫಲಕದಲ್ಲಿರುವ ಅಂಬೇಡ್ಕರ್ ಭಾವಚಿತ್ರವನ್ನೂ ವಿರೂಪಗೊಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದ ದಲಿತ ಮುಖಂಡರು, ‘ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿದವರನ್ನು ಬಂಧಿಸುವಂತೆ ಒತ್ತಾಯಿಸಿ’ ಪ್ರತಿಭಟನೆ ಆರಂಭಿಸಿದ್ದಾರೆ.
ಇದನ್ನೂ ನೋಡಿ: ಅಂಬೇಡ್ಕರ್ ಮತ್ತು ಕಾರ್ಮಿಕ ಕಾನೂನುಗಳು – ಅಶ್ವಿನಿ ಒಬುಳೇಶ್ Janashakthi Media