ಹೊಳೆಹೊನ್ನೂರಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಶಿವಮೊಗ್ಗ : ಹೊಳೆಹೊನ್ನೂರಿನಲ್ಲಿ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಘಟನೆ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದ ಕಿಡಿಗೇಡಿಗಳ ಪತ್ತೆಗೆ  ಪೊಲೀಸರ ಬಲೆ ಬೀಸಿದ್ದಾರೆ.

ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿದ್ದ (ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಸರ್ಕಲ್‌ನಲ್ಲಿ ಗಾಂಧಿ ಪ್ರತಿಮೆ, ಅದರ ಸುತ್ತಲು ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ:ಮಹಿಳಾ ನಾಯಕರ ದೇಹದ ಬಗ್ಗೆ ಅವಹೇಳನಕಾರಿ ಹೇಳಿಕೆ;ವಿಶ್ವೇಶ್ವರ್‌ ಭಟ್‌ ವಿರುದ್ಧ ಆಕ್ರೋಶ

ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಳೆಹೊನ್ನೂರಿನಲ್ಲಿ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನರವರು ತೀವ್ರವಾಗೀ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್‌ಮಾಡಿರುವ ಅವರು ಈ ನೆಲದ ಸ್ವಾತಂತ್ರ್ಯ ಚಳುವಳಿಯ ಹಿನ್ನೆಲೆ,ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ  ಕಾನೂನು ಕೈಗೆತ್ತಿಕೊಳ್ಳದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

 

 

Donate Janashakthi Media

Leave a Reply

Your email address will not be published. Required fields are marked *