ತಪ್ಪಿದ ಕೈ ಟಿಕೆಟ್‌ : ಅಭಿಮಾನಿಗಳಿಗೆ ವೈಎಸ್‌ವಿ ದತ್ತ ಭಾವುಕ ಪತ್ರ

Please follow and like us:

ಚಿಕ್ಕಮಗಳೂರು: ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿರುವ ವೈಎಸ್‌ವಿ ದತ್ತ ಅವರು ಮುಂದಿನ ನಡೆ ಕುರಿತು ಚರ್ಚಿಸಲು ಇದೇ 9ರಂದು ಕಡೂರಿನಲ್ಲಿ ಅಭಿಮಾನಿಗಳ ಸಭೆ ಏರ್ಪಡಿಸಿದ್ದಾರೆ.

ಬೆಳ್ಳಿಗೆ 11 ಗಂಟೆಗೆ ಸಭೆ ಆರಂಭವಾಗಲಿದೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪತ್ರದ ಮೂಲಕ ಕೋರಿದ್ದಾರೆ.

ಪತ್ರದ ಸಾರಾಂಶ ಇಂತಿದೆ.

‘ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ, ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ‘ದತ್ತಣ್ಣ ನಮ್ಮ ದತ್ತಣ್ಣ’ ಎಂದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ‘ನಿಮ್ಮ ಜೊತೆಗೇ ನಾನಿರಬೇಕು, ನನ್ನ ಜೊತೆಗೇ ನೀವಿರಬೇಕು’ ಎಂಬುದು ಅನಿವಾರ್ಯವಾಗಿದೆ. ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅವಮಾನವಾಗಿದೆ.

ಇದನ್ನೂ ಓದಿ : ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ, ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಕಡೂರು ಪಟ್ಟಣದಲ್ಲಿ 9ರಂದು ಬೆಳಿಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿ ಆಶೀರ್ವದಿಸಬೇಕು’ ಎಂದು ಅವರು ಕೋರಿದ್ದಾರೆ.

Please follow and like us:
Donate Janashakthi Media

Leave a Reply

Your email address will not be published. Required fields are marked *