ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಿಜೋರಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 12 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.
ಮಿಜೋರಾಂ ವಿಧಾನಸಭಾ ಚುನಾವಣೆಗೆ ಬಿಜೆಪಿ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಿಜೋರಾಂನ ಎಲ್ಲಾ 40 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 7 ರಂದು ಮತದಾನ ನಡೆಯಲಿದೆ ಮತ್ತು ಅದರ ಫಲಿತಾಂಶಗಳು ಡಿಸೆಂಬರ್ 3 ರಂದು ಬಹಿರಂಗಗೊಳ್ಳಲಿವೆ.
ಕಾಂಗ್ರೆಸ್ ಮಂಗಳವಾರ (13 ಅಕ್ಟೋಬರ್ 2023) ಒಟ್ಟು 40 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮಿಜೋರಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸೋಮವಾರ ಎಲ್ಲಾ 40 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೊದಲು ಪಕ್ಷವು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು ಮತ್ತು ನಂತರ ಸಂಜೆಯ ನಂತರ ಉಳಿದ ಒಂದು ಸ್ಥಾನಕ್ಕೂ ಅಭ್ಯರ್ಥಿಗಳನ್ನು ಘೋಷಿಸಲಾಯಿತು. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮಿಜೋರಾಂ ಪ್ರವಾಸದಲ್ಲಿದ್ದ ದಿನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಇದನ್ನೂ ಓದಿ: ಮಾನಹಾನಿ ಪ್ರಕರಣ ರದ್ದುಪಡಿಸಲು ಕೋರಿ ಬಾಂಬೆ ಹೈಕೋರ್ಟ್‌ಗೆ ರಾಹಲ್ ಗಾಂಧಿ ಮೊರೆ
ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ಮಿಜೋರಾಂ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನಕ್ಸಲ್ ಸಂಘರ್ಷ ಪೀಡಿತ ಛತ್ತೀಸ್ ಘಡದಲ್ಲಿ ಮಾತ್ರ 2 ಹಂತದಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ಯೋಜಿಸಿದೆ.
ಅದರಂತೆ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದ್ದು, ಛತ್ತೀಸ್ ಘಡದಲ್ಲಿ ನವೆಂಬರ್ 7 ಮತ್ತು 17ರಂದು 2 ಹಂತದಲ್ಲಿ ಮತದಾನ ನಡೆಯಲಿದೆ.
ಉಳಿದಂತೆ ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು, ರಾಜಸ್ಥಾನದಲ್ಲಿ ನವೆಂಬರ್ 23ರಂದು ಮತ್ತು ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಎಲ್ಲ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
BJP releases list of 12 candidates for Mizoram Assembly Election.#MizoramElection2023 pic.twitter.com/JgFcLD1dEN
— Press Trust of India (@PTI_News) October 18, 2023
ವಿಡಿಯೋ ನೋಡಿ: ಮೈಸೂರು ದಸರಾ ಉದ್ಘಾಟನೆ :ಕನ್ನಡ ಉಳಿವಿಗೆ ‘ಹಂಸಲೇಖ 10 ಸಂಕಲ್ಪ ಸೂತ್ರ’ Janashakthi Media