ಬೆಂಗಳೂರು : ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ 48 ಗಂಟೆಯೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಬೇಕು ಹಾಗೂ 5 ಲಕ್ಷ ಬಾಂಡ್ ಜೊತೆಗೆ ಇಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಲಯವು ಸೂಚನೆ ನೀಡಿದೆ.
ಕೆಎಸ್‌ಡಿಎಲ್ ಟೆಂಡರ್ ಹಗರಣದಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಕೇಸ್ ದಾಖಲಾಗಿತ್ತು. ಎ1 ಆರೋಪಿಯಾಗಿರುವ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಮನವಿಯನ್ನು ಸಲ್ಲಿಸಿದ್ದರು.
ಸದ್ಯ. ಶಾಸಕ ಮಾಡಾಳು ವಿರೂಪಾಕ್ಷಪ್ಪ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವುದಕ್ಕೆ ಸಾಕ್ಷಿಗಳಿಲ್ಲ, ದೂರುದಾರ ಹಾಗೂ ಆರೋಪಿಗೂ ನೇರವಾದ ಸಂಪರ್ಕದ ಬಗ್ಗೆ ಯಾವುದೇ ಸಾಕ್ಷಿಗಳಿಲ್ಲದಿರುವ ಕಾರಣ ತನಿಖಾಧಿಕಾರಿಗಳ ತನಿಖೆಗೆ ಸಹಕರಿಸಲು ಷರತ್ತು ವಿಧಿಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಲೋಕಾಯುಕ್ತ ದಾಳಿಯಲ್ಲಿ ಪುತ್ರನ ಮನೆಯಲ್ಲಿ ಸಿಕ್ಕ ಕೋಟಿ ಕೋಟಿ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎ1 ಆರೋಪಿಯಾಗಿದ್ದಾರೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು, ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್‍ಗೆ ಮನವಿಯನ್ನೂ ಸಹ ಮಾಡಿಕೊಂಡಿದ್ದರು. ಇದೀಗ ಹೈಕೋರ್ಟ್ ಮಾಡಾಳುವಿಗೆ ಜಾಮೀನು ಮಂಜೂರು ಮಾಡಿದೆ.
ಶಾಸಕ ಮಾಡಾಳು ವಿರುದ್ಧ ಸೂಕ್ತ ಕೈಗೊಳ್ಳಬೇಕೆಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ, ಕೇಂದ್ರದಲ್ಲಿ 9 ವರ್ಷದಿಂದ ಬಿಜೆಪಿ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಶಾಸಕರನ್ನು ಖರೀದಿ ಮಾಡಿ ಅನೈತಿಕ ಸರ್ಕಾರ ರಚನೆ ಮಾಡಿದ ಬಿಜೆಪಿ ಲೂಟಿ ಹೊಡೆಯುವುದರಲ್ಲೇ ಕಾಲ ಕಳೆದಿದೆ. ಭ್ರಷ್ಟಚಾರಕ್ಕೆ ಬಿಜೆಪಿ ಮತ್ತು ಮುಖ್ಯಮಂತ್ರಿ ಸಾಕ್ಷ್ಯ ಕೇಳುತ್ತಿದ್ದಾರೆ. ಮಾಡಾಳು ವಿರೂಪಾಕ್ಷಪ್ಪನ ಪುತ್ರ ಪ್ರಶಾಂತ್ ಕೆಎಸ್‍ಡಿಎಲ್‍ನ ಟೆಂಡರ್ ಕೊಡಿಸಲು 80 ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆಯಿಟ್ಟು, 40 ಲಕ್ಷ ರೂಪಾಯಿ ಪಡೆಯುವಾಗ ಸಿಕ್ಕಿ ಬಿದ್ದಿದ್ದಾನೆ. ವಿರೂಪಾಕ್ಷಪ್ಪ ಯಡಿಯೂರಪ್ಪ ಅವರ ಕಟ್ಟಾ ಅನುಯಾಯಿ ಎಂದು ಆರೋಪಿಸುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದರು.