ವಿಜಯಪುರ: ನನ್ನ ಕ್ಷೇತ್ರದ ಗ್ರಾಮಗಳಿಗೆ ಕಾಲುವೆ ಮೂಲಕ ಕೃಷಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುವೆ ಎಂದು ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ತಮ್ಮದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರಲ್ಲಿಂದು ಮಾಧ್ಯಗಳ ಜೊತೆ ಮಾತನಾಡಿದ ಯಶವಂತರಾಯಗೌಡ, ಇಂಡಿ ತಾಲೂಕಿನ ಕಟ್ಟಕಡೆಯ ಹಳ್ಳಿಗಳಿಗೂ ಕಾಲುವೆ ನೀರು ಬಂದಿಲ್ಲ, ಗುತ್ತಿ ಬಸವಣ್ಣ ಏತ ನೀರಾವರಿ, ಇಂಡಿ ಶಾಖಾ ಕಾಲುವೆಯಿಂದ ನೀರು ಹರಿಸಬೇಕು. ಒಂದು ವೇಳೆ ನನ್ನ ಕ್ಷೇತ್ರಕ್ಕೆ ನೀರು ಬರದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಕ್ಷೇತ್ರದ ಜನರಿಗೆ ಅನುಕೂಲ ಆಗದಿದ್ದರೆ ನಾಳೆಯೇ ರಾಜೀನಾಮೆ ನೀಡುವೆ. ನಾಡಿದ್ದು ರಾಜಕೀಯದಿಂದಲೇ ನಿವೃತ್ತಿಯಾಗುವೆ ಸ್ವಪಕ್ಷದ ಸರ್ಕಾರದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ಕ್ಷೇತ್ರ
ಇದನ್ನೂ ಓದಿ : ಸೋಮಣ್ಣ ಸೆಳೆಯಲು ಕೈ ತಂತ್ರ: ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?
ಇಂಡಿ ಕ್ಷೇತ್ರ ವಿಧಾನಸಭಾ ಕ್ಷೇತ್ರ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದ್ದು, ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯಲ್ಲಿ ಇಂಡಿ ಶಾಖಾ ಕಾಲುವೆ ಮೂಲಕ ನೀರು ಹರಿಯಬೇಕಿತ್ತು. ಆದರೆ ಇಂಡಿ ಗಡಿವರೆಗೆ ಮಾತ್ರ ನೀರು ಹರಿಯುತ್ತಿದ್ದು, ಕಾಲುವೆ ಕಟ್ಟಕಡೆಗೆ ನೀರು ಬರ್ತಿಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಕ್ಷದ ಬದ್ಧತೆ ಇದೆ, ಕಾಂಗ್ರೆಸ್ ಪಕ್ಷದಿಂದಲೇ ರಾಜಕಾರಣ ಮಾಡಿದ್ದೇನೆ, ಇಲ್ಲೆ ನಿವೃತ್ತಿ ಆಗುವೆ. ಜನರಿಗೆ ಅನಕೂಲ ಆಗದಿದ್ದರೆ ನಾಳೆಯೇ ರಾಜೀನಾಮೆ ನೀಡುವೆ. ನಾಡಿದ್ದೆ ನಿವೃತ್ತಿಯಾಗುವೆ. ಜನರಿಗೆ ನೀರು ಬರದಿದ್ದರೆ ಯಾವ ಪುರುಷಾರ್ಥಕ್ಕೆ ರಾಜಕಾರಣ ಮಾಡಬೇಕು. ಜನರ ಸಮಸ್ಯೆಯನ್ನು ನೇರವಾಗಿ ಎದೆಗಾರಿಕೆಯಿಂದ ಹೇಳುವೆ ಎಂದು ಹೇಳಿದರು. ಕ್ಷೇತ್ರ
ಶಾಸಕ ಹಾಗೂ ಸಚಿವರ ನಡುವಿನ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್ ಸೃಷ್ಟಿಯಾಗಿದ್ದ ಗೊಂದಲಗಳು ಬಗೆಹರಿದಿವೆ ಎನ್ನುವ ಮಧ್ಯೆ ಕಾಂಗ್ರೆಸ್ ಶಾಸಕ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಗುಡುಗಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ಈ ವಿಡಿಯೋ ನೋಡಿ : ಶಿಕ್ಷಣ ಇಲಾಖೆಯ ಜವಾಬ್ದಾರಿ ಪಂಚಾಯತ್ ರಾಜ್ ಇಲಾಖೆಗೆ! Janashakthi Media ಕ್ಷೇತ್ರ