ಕೊಟ್ಟ ಮಾನಂತೆ ರೈತರಿಗೆ 3 ಹಸು ಕೊಡಿಸಿದ ಶಾಸಕ ಜಮೀರ್ ಅಹಮದ್

ಬೆಂಗಳೂರು: ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಕೊಟ್ಟ ಮಾತಿನಂತೆ ಚಾಮರಾಜಪೇಟೆ ಶಾಸಕ, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ರೈತರಿಗೆ ಮೂರು ಹಸುಗಳನ್ನು ನೀಡಿದ್ದಾರೆ.

ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು. ರೈತ

ಇದನ್ನೂ ಓದಿ: ದಲಿತರಿಗೆ ಅಪಮಾನ: ಆಂದೋಲಾ ಶ್ರೀ ವಿರುದ್ಧ ‘FIR’ ದಾಖಲು

ಈ ವೇಳೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.

ಇದನ್ನೂ ನೋಡಿ: ‘ದಲಿತ’ ಪದ ಅಸ್ಮಿತೆಯೋ? ಅವಮಾನವೋ? Janashakthi Media

Donate Janashakthi Media

Leave a Reply

Your email address will not be published. Required fields are marked *