ನವದೆಹಲಿ: ರಾಜ್ಯದಲ್ಲಿ ಬೈಎಲೆಕ್ಷನ್ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದ ಚಟುವಟಿಕೆಗಳು ಗರಿಗೆದರಿದೆ, ಹಿರಿಯ ಶಾಸಕರ ದಂಡು ದೆಹಲಿಗೆ ಪ್ರಯಾಣ ಬೆಳೆಸಿದೆ. ಲಾಬಿ
ಸಚಿವ ಸ್ಥಾನ ಆಕಾಂಕ್ಷಿಗಳಾಗಿರುವ ಕಾಂಗ್ರೆಸ್ ಶಾಸಕರು, ತಮ್ಮ ಬೇಡಿಕೆಗಳನ್ನು ನೇರವಾಗಿ ಹೈಕಮಾಂಡ್ ಗಮನಕ್ಕೆ ತರಲು ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಆದರೆ, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋದವರಿಗೆ ನಿರಾಸೆ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಲಾಬಿ
ಕಾಂಗ್ರೆಸ್ನ ಹಿರಿಯ ಶಾಸಕರು ಮಂತ್ರಿ ಸ್ಥಾನವನ್ನು ಕೇಳಿಕೊಂಡು ದೆಹಲಿಗೆ ತಲುಪಿದ್ದಾರೆ. ಏ. 15ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕೆಲ ಶಾಸಕರು ಭೇಟಿಯಾಗಿದ್ದರು. ಆದರೆ, ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿರುವ ಶಾಸಕರಿಗೆ ನಿರಾಸೆ ಉಂಟಾಗಿದೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟ ಭರವಸೆ ನೀಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಹಾರುಬೂದಿಯಿಂದ ರೈತರಿಗೆ ಕಷ್ಟ: NTPC ವಿರುದ್ಧ ಆಕ್ರೋಶ
ಶಾಸಕರಿಗೆ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದೇನು?
ಸುಮಾರು 15ಕ್ಕೂ ಹೆಚ್ಚು ಕಾಂಗ್ರೆಸ್ನ ಶಾಸಕರು ದೆಹಲಿ ಪ್ರವಾಸ ಕೈಗೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಅವರನ್ನು ಭೇಟಿಯಾಗಿದ್ದಾರೆ. ಆದರೆ, ಶಾಸಕರನ್ನು ಭೇಟಿಯಾದ ಮಲ್ಲಿಕಾರ್ಜುನ್ ಖರ್ಗೆ ಅವರು, ಶಾಸಕರಿಗೆ, ಐದು ರಾಜ್ಯಗಳ ಚುನಾವಣೆ ಮುಗಿಯಲಿ, ಆಮೇಲೆ ನೋಡೋಣ ಎಂದು ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.
ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಮೂವರು ಶಾಸಕರು ರಾಜ್ಯಕ್ಕೆ ವಾಪಸ್ ಆಗಮಿಸಿದ್ದಾರೆ. ಶಾಸಕರಾದ ಕೃಷ್ಣಮೂರ್ತಿ, ಸುಬ್ಬಾ ರೆಡ್ಡಿ ಹಾಗೂ ನಾರಾಯಣಸ್ವಾಮಿ ವಾಪಸ್ ಬೆಂಗಳೂರಿಗೆ ಬಂದಿದ್ದಾರೆ.
ಅಂಬೇಡ್ಕರ್ ಜಯಂತಿ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಶಾಸಕರು ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇನ್ನುಳಿದ ಶಾಸಕರು ನಾಳೆ ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಭೇಟಿಗೆ ದೆಹಲಿಯಲ್ಲೇ ವಾಸ್ತವ್ಯ ಹೂಡಿದ್ದಾರೆ. ಅಶೋಕ್ ಪಟ್ಟಣ್, ಟಿ.ಬಿ.ಜಯಚಂದ್ರ ಸೇರಿದಂತೆ ಸುಮಾರು 15 ಮಂದಿ ಶಾಸಕರು ದೆಹಲಿಯಲ್ಲೇ ಠಿಕಾಣಿ ಹೂಡಿದ್ದಾರೆ.
ಸಿಎಂ ಬದಲಾವಣೆ ಕುರಿತು ನಾವು ಯಾವುದೇ ಚರ್ಚೆ ಮಾಡಿಲ್ಲ
ಇನ್ನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ಬಳಿಕ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಚಿವ ಸಂಪುಟ ಪುನರ್ ರಚನೆ ಕುರಿತು ಚರ್ಚೆ ಮಾಡಿದ್ದೇವೆ. ಸಹಾನುಭೂತಿಯಿಂದ ನಮ್ಮ ಮನವಿ ಕೇಳಿದ್ದಾರೆ.
ಅವರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಮ್ಮ ಮನವಿ ನಾವು ಮಾಡಿದ್ದೇವೆ. ಸಿಎಂ ಬದಲಾವಣೆ ಕುರಿತು ನಾವು ಯಾವುದೇ ಚರ್ಚೆ ಮಾಡಿಲ್ಲ, ನಾಲ್ಕು ಗೋಡೆಗಳ ನಡುವೆ ಈ ವಿಷಯ ಇದೆ. ಖರ್ಗೆಯವರು ನಮಗೆ ಭರವಸೆ ಕೊಟ್ಟಿದ್ದಾರೆ. ಸಂಪುಟ ಪುನರ್ ರಚನೆ ಆಗುತ್ತದೆ ಎಂಬ ವಿಶ್ವಾಸ ಇದೆ ಎಂದು ದೆಹಲಿಯಲ್ಲಿ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಮಾಹಿತಿ ನೀಡಿದರು.
ಇದನ್ನೂ ನೋಡಿ: ನಾಡ ನಡುವಿನಿಂದ ಸಿಡಿದ ನೋವಿನ ಕೂಗೆ | ಡಾ ಸಿದ್ದಲಿಗಯ್ಯ | ಪಿಚ್ಚಳ್ಳಿ ಶ್ರೀನಿವಾಸ Janashakthi Media
