ಕೊಡಗು: ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಮಂತರ್ ಗೌಡ ಹೆಸರನ್ನು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ಬಿಜೆಪಿ ಬೇಡಿಕೆಯನ್ನು ತಳ್ಳಿ ಹಾಕಿದ್ದಾರೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಧ್ಯಮದವರಿಗೆ ತಿಳಿಸಿದರು.
ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಸೇರಿಸಬೇಕೆಂಬ ಬಿಜೆಪಿ ನಾಯಕರ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಬೇಡಿಕೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಬಿಜೆಪಿಯವರು ಹತಾಶರಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಮೈಸೂರು ಏರ್ಪೋರ್ಟ್ ರನ್ ವೇ ವಿಸ್ತರಣೆ ಕೆಲಸ ಆರಂಭಿಸಿ: ವಿಮಾನಯಾನ ಸಚಿವರಿಗೆ ಸಿದ್ದರಾಮಯ್ಯ ಮನವಿ ಪತ್ರ
ಸಾವಿನಲ್ಲೂ ರಾಜಕೀಯ ಮಾಡುವುದು ಬಿಜೆಪಿಗೆ ಅಭ್ಯಾಸವಾಗಿದೆ. ಅವರು ಹೇಳಿದ್ದಕ್ಕೆಲ್ಲಾ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಕಾಂಗ್ರೆಸ್ ವಕ್ತಾರ ತೆನ್ನೀರ ಮಹಿನಾ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿನಯ್ ಸೋಮಯ್ಯ ಸಹೋದರ ಜೀವನ್ ಪೊಲೀಸರಿಗೆ 6 ಪುಟಗಳ ದೂರು ಸಲ್ಲಿಸಿದ್ದಾರೆ. ಇದರ ಆಧಾರದ ಮೇಲೆ ಬಿಎನ್‌ಎಸ್ ಸೆಕ್ಷನ್ 108, ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ತೆರಾ ಮಹಿನಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ವಿರಾಜಪೇಟೆ ಶಾಸಕ ಪೊನ್ನಣ್ಣ ಆಪ್ತ ತನ್ನೀರಾ ಮಹೀನಾ ಕಾರಣ ಎಂದು ಉಲ್ಲೇಖಿಸಿದ್ದರು.
ಇದನ್ನೂ ನೋಡಿ: ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ಯಾಕೆ? ಯಾವುದು ವಕ್ಫ್ ಆಸ್ತಿ? ವಕ್ಫ್ ಬೋರ್ಡ್ ಯಾಕೆ ಬೇಕು?Janashakthi Media