ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; ಪುಟ್ಟಣ್ಣ, ಎ ಪಿ ರಂಗನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ ಪಿ ರಂಗನಾಥ್ , ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ಸೋಮವಾರ ನಾಮಪತ್ರ ಸಲ್ಲಿಸಿದರು.  ಬೆಂಗಳೂರು

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಬೆಂಗಳೂರಿನ ಶಾಂತಿ ನಗರದ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಬೆಂಗಳೂರು

ಈ ವೇಳೆ ಮಾತನಾಡಿದ ಸಚಿವ ಸುಧಾಕರ್‌, ಈಗಾಗಲೇ ನಾಲ್ಕು ಬಾರಿ ಮೇಲ್ಮನೆಗೆ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಶಿಕ್ಷಕರು ಮತ್ತು ಶಿಕ್ಷಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ‌. ಪುಟ್ಟಣ್ಣ ಗೆಲುವು ನಿಶ್ಚಿತ ಎಂದು ಹೇಳಿದರು.

ಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಸ್ಪಂದಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಶಿಕ್ಷಕ ಸಮುದಾಯದ ಪ್ರತಿಯೊಂದು ಬೇಡಿಕೆಗಳನ್ನು ಈಡೇರಿಸಲು ಆದ್ಯತೆ ನೀಡುತ್ತೇವೆ. ಶಿಕ್ಷಕ ಸಮುದಾಯ ಮತ್ತೊಮ್ಮೆ ತಮ್ಮನ್ನು ಬೆಂಬಲಿಸಲಿದೆ ಎಂದು ಹೇಳಿದರು. ಬೆಂಗಳೂರು

ಇದನ್ನು ಓದಿ : ಬಿಹಾರದಲ್ಲಿ ಜೆಡಿಯು-ಬಿಜೆಪಿ ಹೊಸ ಸರ್ಕಾರ ಅಸ್ತಿತ್ವಕ್ಕೆ :  ಸಿಎಂ ಆಗಿ ‘ನಿತೀಶ್ ಕುಮಾರ್’ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಸೋಮವಾರ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು ಉಪಸ್ಥಿತರಿದ್ದರು.

2023 ರ ವಿಧಾನಸಭಾ ಚುನಾವಣೆಯಲ್ಲಿ ವಿಧಾನ ಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.  ಬೆಂಗಳೂರುಚುನಾವಣೆ

ಇದನ್ನು ನೋಡಿ : ಬೆಲ್ಲದಂತಹ ಜನರಿಗೆ ಕೋಮುವಾದದ ಬೇವು ಕುಡಿಸಬೇಡಿJanashakthi Media

Donate Janashakthi Media

Leave a Reply

Your email address will not be published. Required fields are marked *