ಮೈಸೂರು : ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ ಇದೆ. ನಾನು ಹಿಡಿಯುವ ಧ್ವಜ ಕಾಲದಿಂದ ಕಾಲಕ್ಕೆ ಬದಲಾಗುತ್ತಿರುತ್ತದೆ. ಆದರೆ ನನ್ನ ತತ್ವ ಸಿದ್ದಾಂತಗಳು ಎಂದಿಗೂ ಬದಲಾಗಿಲ್ಲ. ಬಿಜೆಪಿ ತೊರೆಯುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ಎಂಎಲ್ಸಿ ಹೆಚ್. ವಿಶ್ವನಾಥ್ ಹೇಳಿದರು.
ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಆತ್ಮವೇ ಚುನಾವಣೆ. ಆದರೆ, ಎಲ್ಲ ಪಕ್ಷದ ಮುಖಂಡರು ಮ್ಯಾಜಿಕ್ ನಂಬರ್ ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ. ಮ್ಯಾಜಿಕ್ ನಂಬರ್ ನಿರ್ಣಯಿಸುವವರು ಮತದಾರರು. ಆದರೆ, ಬಿಜೆಪಿಗೆ ಯಾರು ಮತ ನೀಡುವುದಿಲ್ಲವೋ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಕೆಲಸ ಮಾಡುತ್ತಿದೆ. ಇಂತಹ ಅಯೋಗ್ಯತನ ನನ್ನ ರಾಜಕೀಯ ಜೀವನದಲ್ಲಿ ಕಂಡಿಲ್ಲ. ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡು. ಜನತಂತ್ರ ವ್ಯವಸ್ಥೆಗೆ ಮಾಡಿದ ದೊಡ್ಡ ಅಪಮಾನವಿದು ಎಂದು ಆಕ್ರೋಶ ವ್ಯಕ್ಯಪಡಿಸಿದರು.
ಜನಸಾವಾನ್ಯರನ್ನು ಕಡೆಗಣಿಸಿದ ಮೋದಿ ಸರಕಾರ : ಆಹಾರ, ಆರೋಗ್ಯ, ಶಿಕ್ಷಣ ಕ್ಷೇತ್ರ ಸುಭಿಕ್ಷವಾಗಿದ್ದಾಗ ದೇಶ ಅಭಿವೃದ್ಧಿಯಾಗುತ್ತದೆ. ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಕ್ಷೇತ್ರಗಳನ್ನು ಕಡೆಗಣಿಸಿ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಬಜೆಟ್ ಮಂಡಿಸಿದ್ದಾರೆ.
ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಈ ಕ್ಷೇತ್ರಗಳಿಗೆ ಅನುದಾನ ಕಡಿಮೆ ವಾಡುತ್ತಾ ಬಂದಿದೆ. ಮೋದಿ ಪ್ರಧಾನಿ ಆದ ಮೇಲೆ ಅಲ್ಪಸಂಖ್ಯಾತ ಶಾಲೆಗಳಿಗೆ ಅನುದಾನ ಸಿಗುತ್ತಿಲ್ಲ. ಇದು ಅಲ್ಪಸಂಖ್ಯಾತರು ವಾತ್ರವಲ್ಲದೆ ಭಾರತದ ಅಭಿವೃದ್ಧಿಗೂ ಹೊಡೆತ ನೀಡುತ್ತಿದೆ. ನಮಗೆ ಬೇಕಿರುವುದು ಮೂಲ ಸೌಲಭ್ಯವೇ ಹೊರತು, ವಿಮಾನ ನಿಲ್ದಾಣಗಳಲ್ಲ. ಕಳೆದ 5 ವರ್ಷಗಳಲ್ಲಿ ದೇಶದ ಅಭಿವೃದ್ಧಿ ದರ ಕಡಿಮೆಾಂಗುತ್ತಲೆ ಇದೆ. ಜನಸಾವಾನ್ಯರನ್ನು ಕಡೆಗಣಿಸಿರುವ ಸರ್ಕಾರ ಉಳ್ಳವರ ಪರವಾಗಿ ನಿಲ್ಲುತ್ತಿದೆ. ಇದೇನಾ ನಿಮ್ಮ ಅಭಿವೃದ್ಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಬಿಜೆಪಿ ತೊರೆಯಲಿದ್ದಾರೆಯೇ ಹಳ್ಳಿಹಕ್ಕಿ; ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಭೇಟಿ ಮಾಡಿದ ಎಚ್.ವಿಶ್ವನಾಥ್
ಯಡಿಯೂರಪ್ಪ ಏಕೆ ಸುಮ್ಮನಿದ್ದೀರಿ?: 305 ಕೋಟಿ ರೂ. ಲಾಭದಲ್ಲಿರುವ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆುಂನ್ನು ಮುಚ್ಚಲು ಸರ್ಕಾರ ಹೊರಟಿದೆ. ಕಾರ್ಖಾನೆಯಲ್ಲಿ ಈಗಲೂ 220 ಖಾಯಂ ನೌಕರರಿದ್ದು, ಸಾವಿರಾರು ಮಂದಿ ಅರೆಕಾಲಿಕ ನೌಕರರು ದುಡಿಯುತ್ತಿದ್ದಾರೆ. ಹೀಗಿದ್ದರೂ ಮುಚ್ಚಲು ಹೊರಟಿರುವುದು ಏಕೆ? ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿ.ವೈ. ವಿವಿಜಯೇಂದ್ರ ಏನು ವಾಡುತ್ತಿದ್ದಾರೆ? ನೀವೇನಾದರೂ ಭೂಮಿ ಲಪಟಾಯಿಸಲು ನೋಡುತ್ತಿದ್ದೀರಾ? ಸರ್ಕಾರಿ ಭೂಮಿ ಲಪಟಾಯಿಸುವುದರಲ್ಲಿ ನೀವು ನಿಸ್ಸೀಮರು. ಮೋದಿ ಹಾಗೂ ಅಮಿತ್ ಶಾ ಸೇರಿಕೊಂಡು ಕರ್ನಾಟಕದ ಎಲ್ಲ ಆಸ್ತಿಗಳನ್ನು ಒಂದೊಂದಾಗಿ ಗುಜರಾತ್ನ ವಾರ್ವಾಡಿಗಳಿಗೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
ಭದ್ರಾವತಿ ವಿಧಾನಸಭೆ ಕ್ಷೇತ್ರದಲ್ಲಿ ಇದುವರೆಗೂ ಒಮ್ಮೆಯೂ ಬಿಜೆಪಿ ಗೆದ್ದಿಲ್ಲ. ಹಾಗಾಗಿ ಭದ್ರಾವತಿ ಕಂಡರೆ ಬಿಜೆಪಿಯವರಿಗೆ ಆಗುವುದಿಲ್ಲ. ಫೆ.೨27 ರಂದು ಶಿವಮೊಗ್ಗಕ್ಕೆ ಮೋದಿ ಬರುತ್ತಿದ್ದು, ಅಲ್ಲಿನ ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಈ ಬಗ್ಗೆ ಪ್ರಶ್ನೆ ವಾಡಬೇಕು ಎಂದು ಹೇಳಿದರು. ಮೇಕ್ ಇನ್ ಇಂಡಿಯಾ ಬಗ್ಗೆ ವಾತನಾಡುವ ಪ್ರಧಾನಿ ಮೋದಿ ಒಂದೊಂದಾಗಿ ದೇಶದ ಕಾರ್ಖಾನೆಗಳನ್ನು ಮುಚ್ಚುತ್ತಿದ್ದಾರೆ. ಸೇಲಂನಲ್ಲಿ ಇದೇ ರೀತಿಯ ಕಾರ್ಖಾನೆ ಮುಚ್ಚಲು ಮುಂದಾದಾಗ ಅಲ್ಲಿನ ಜನತೆ, ಸಂಸದರು ತಿರುಗಿ ಬಿದ್ದಿದ್ದರಿಂದ ಕಾರ್ಖಾನೆ ಪುನಾರಂಭವಾಗಿದೆ. ಆ ತಾಕತ್ತು ನಮ್ಮ ಮುಖ್ಯಮಂತ್ರಿ, ಸಂಸದರಿಗೆ ಯಾಕಿಲ್ಲ ಎಂದು ಪ್ರಶ್ನಿಸಿದರು.