ಮೈಸೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ ಪುತ್ರ, ಪೂರ್ವಜ್ ಇದೀಗ ಕಾಂಗ್ರೆಸ್ ಸೇರ್ಪಡೆಯಾಗೋದಾಗಿ ಘೋಷಿಸಿದ್ದಾರೆ. ಅಲ್ಲದೇ ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.
ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರಿನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿದ ಪೂರ್ವಜ್, ತಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ಆಗೋದಕ್ಕೆ ನಿರ್ಧರಿಸಿದ್ದೇನೆ. ಈ ಬಗ್ಗೆ ಸಿದ್ಧರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ. ಅವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ತಂದೆ ಎಚ್ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ಅವರು ಅದು ನಿನ್ನ ಇಷ್ಟ ಅಂತಾ ಹೇಳಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿಯಾಗುವರೆಗು ಜೊತೆಯಲ್ಲಿ ನಿಲ್ಲುತ್ತೇನೆ. ಸಿದ್ದರಾಮಯ್ಯನವರು ಮುಂದೆ ಮುಖ್ಯಮಂತ್ರಿ ಆಗುವ ಎಲ್ಲಾ ವಾತಾವರಣ ಇದೆ. ದಾವಣಗೆರೆ ಕಾರ್ಯಕ್ರಮಕ್ಕೂ ನಾನು ಹೋಗಿದ್ದೆ ಎಂದು ತಿಳಿಸಿದರು.