ಚಿತ್ರದುರ್ಗ: ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸುತ್ತಿರುವ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದವರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮ ಲೆಕ್ಕಾಧಿಕಾರಿಗಳು ಕಂದಾಯ ಇಲಾಖೆ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಮೊಬೈಲ್ ತಂತ್ರಾಂಶಗಳಿಂದ ಕೆಲಸ ನಿರ್ವಹಿಸುವುದು ಕಷ್ಟವಾಗುತ್ತಿದೆ. ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆವಿಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ರದ್ದುಪಡಿಸಿ ರಜಾ ದಿನಗಳಲ್ಲಿ ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹೇರಬಾರದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿಯಿರುವ ಪ್ರಥಮ ದರ್ಜೆ ಸಹಾಯಕ/ರಾಜಸ್ವ ನಿರೀಕ್ಷಕರ ಹುದ್ದೆಗಳಿಗೆ ತಕ್ಷಣವೆ ಪದೋನ್ನತಿ ನೀಡುವಂತೆ ಪ್ರತಿಭಟನಾನಿರತ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಲಕ್ಷಾಂತರ ರೂಪಾಯಿ ವಂಚಿನೆಯ ದೂರು ದಾಖಲು
ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ರಾಜ್ಯ ಗೌರವಾಧ್ಯಕ್ಷ ವಿ.ಪಾಂಡುರಂಗಪ್ಪ, ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ, ಕಂದಾಯ ಇಲಾಖೆ ಜಿಲ್ಲಾಧ್ಯಕ್ಷ ಬಿ.ಎಸ್.ಸಿದ್ದೇಶಿ, ತಾಲ್ಲೂಕು ಅಧ್ಯಕ್ಷ ಸಂಪತ್‍ಕುಮಾರ್ ಎಂ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮದ್ ಇರ್ಫಾನ್, ತಾಲ್ಲೂಕಿನ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು ಗ್ರಾಮ ಸಹಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ನೋಡಿ: ಜೀವ ತೆಗೆದವನು ತಾನೂ ಸತ್ತ…ಸಿಕ್ಕೀತೆ ನ್ಯಾಯ…? – ಕೆ.ಎಸ್ ವಿಮಲಾ Janashakthi Media