ಹಾವೇರಿ: ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ತಾಲೂಕಿನ ಎಲ್ಲಾ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಮೊಬೈಲ್ ಸ್ವಿಚ್ ಆಫ್ ಮಾಡಿ, ಟಿವಿಗಳನ್ನು ಆಫ್ ಮಾಡುವಂತೆ ಡಂಗುರ ಸಾರಲು ತಾಲೂಕು ಪಂಚಾಯಿತಿ ಇಒ ಪರಮೇಶ ಹುಬ್ಬಳ್ಳಿಯವರು ಪಿಡಿಓಗಳಿಗೆ ಆದೇಶ ಹೊರಡಿಸಿದ್ದಾರೆ. ಹಾವೇರಿ
ಎಸ್ಎಸ್ಎಲ್ಸಿ ಪರೀಕ್ಷೆ ಸಮೀಪ
ಎಸ್ಎಸ್ಎಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಮಕ್ಕಳ ಓದಿಗೆ ಮೊಬೈಲ್ ಹಾಗೂ ಟಿವಿಗಳು ತೊಂದರೆಯಾಗುತ್ತಿವೆ.
ಇದನ್ನೂ ಓದಿ: ಚಾರ್ಮಾಡಿ ಘಾಟಿನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು; ಹತ್ತಾರು ಎಕರೆ ಹುಲ್ಲುಗಾವಲು ಬೆಂಕಿಗಾಹುತಿ
ಮಕ್ಕಳ ಓದಿನ ದೃಷ್ಟಿಯಿಂದ ಆದೇಶ
ಹೀಗಾಗಿ, ಮಕ್ಕಳ ಓದಿನ ದೃಷ್ಟಿಯಿಂದ ಹಾಗೂ ಎಸ್ಸೆಸ್ಸೆಲ್ಸಿ ಮಕ್ಕಳ ಫಲಿತಾಂಶ ಸುಧಾರಣೆಯ ಹಿತದೃಷ್ಟಿಯಿಂದ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೊಬೈಲ್ ಹಾಗೂ ಟಿವಿಗಳನ್ನು ಬಂದ್ ಮಾಡುವಂತೆ ಡಂಗೂರ ಸಾರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಕಾರಿಗಳು ಆದೇಶ ಹೊರಡಿಸಿದ್ದಾರೆ.
ಇದನ್ನೂ ನೋಡಿ: ಬೆಂಗಳೂರು ಚಲನಚಿತ್ರೋತ್ಸವ| ಪ್ಯಾಲೆಸ್ತೀನ್ ಸಿನಿಮಾಗಳಿಗೆ ನಿರ್ಬಂಧ -ಸಿನಿಮಾಸಕ್ತರ ಆಕ್ರೋಶ Janashakthi Media
