ಬೆಂಗಳೂರು: ಭಾನುವಾರ, 9 ಸೆಪ್ಟೆಂಬರ್ ದಂದು ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಕೆಲವೊಮ್ಮೆ ಗುಡುಗು ಜತೆಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಭಾರೀ ಮಳೆಯಾಗುವ ಸಾಧ್ಯತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇದೆ. ಇನ್ನೂ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಿರಂತರ ಗಾಳಿಯ ವೇಗ 40-50 ಕಿ.ಮೀ ಇರಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಚಾರ್ಜ್ಶೀಟ್ ಸಲ್ಲಿಕೆ; ಮಾಜಿ ಸಚಿವ ಬಿ.ನಾಗೇಂದ್ರ ಪ್ರಮುಖ ಕಿಂಗ್‌ಪಿನ್
ಯೆಲ್ಲೋ ಅಲರ್ಟ್
ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಹಗುರ ಮಳೆ
ಮುಂದಿನ 48 ಗಂಟೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ನೋಡಿ: ರಾಜ್ಯಪಾಲರ ನೇಮಕ – ಸಂವಿಧಾನದ ಅಪಭ್ರಂಶ – ಎ. ನಾರಾಯಣJanashakthi Media