ವಿಜಯಪುರ: ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‌ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಿಡಿಕಾರಿದರು. ಸಿದ್ದರಾಮಯ್ಯ
ಸೋಮವಾರ ಡಿಸಿಸಿ ಬ್ಯಾಂಕ್ ಆವರಣದಲ್ಲಿ ನಡೆದ 70ನೇ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದು ಹೇಳಿದರು. ಸಿದ್ದರಾಮಯ್ಯ
ಇದನ್ನೂ ಓದಿ: ದುರಂತ ಬದುಕಿನ ನಡುವೆ ಹಬ್ಬದ ಸಂಭ್ರಮ
ಬಳಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ರಾಜ್ಯದ ಜಿಲ್ಲಾಧಿಕಾರಿಗಳ ಖಾತೆಗೆ ಸರ್ಕಾರ 800 ಕೋಟಿ ರೂ ನೀಡಲಾಗಿದೆ. ”ರೈತರಿಗೆ ಪರಿಹಾರ ನೀಡಲು ಸರಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಡಿಸಿ ಮತ್ತು ಜಿಪಂ ಸಿಇಒಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಅವರಿಗೆ ನರೇಗಾ ಅಡಿಯಲ್ಲಿ ಉದ್ಯೋಗಗಳನ್ನು ಒದಗಿಸಬೇಕು. ಜೊತೆಗೆ ರೈತರು ಮೇವಿನ ಕೊರತೆ ಎದುರಿಸುತ್ತಿದ್ದಾರೆ. ಈ ಮೂರು ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ವಿಡಿಯೋ ನೋಡಿ: ಮಾನವೀಯತೆ ಜಾಗಕ್ಕೆ ಮತೀಯತೆ ಬಂದಿದೆ – ಬರಗೂರು ರಾಮಚಂದ್ರಪ್ಪ Janashakthi Media