ಮೋದಿ ಸರ್ಕಾರ ಚುನಾವಣಾ ಆಯೋಗದ ಮೇಲಿನ ಹಿಡಿತ ಖಚಿತಪಡಿಸಿಕೊಳ್ಳಲು ಯತ್ನ: ಕಾಂಗ್ರೆಸ್‌

ನವದೆಹಲಿ: ಮುಂಬರುವ ಲೋಕಸಭೆ ಹಾಗೂ ವಿವಿಧ ರಾಜ್ಯಗಳ ನಡೆಯುವ ವಿಧಾಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮೇಲಿನ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಶುಕ್ರವಾರ ಆರೋಪಿಸಿದೆ.

ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರನ್ನು (ಸಿಜೆಐ) ಹೊರಗೆ ಇರಿಸುವ ಉದ್ದೇಶದ ಮಸೂದೆಯನ್ನು ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಿದೆ.ಸಿಜೆಐ ಬದಲಿಗೆ ಸಂಪುಟ ದರ್ಜೆಗೆ ಸಚಿವರೊಬ್ಬರು ಸಮಿತಿಯ ಸದಸ್ಯರಾಗಲಿದ್ದಾರೆ.ಇದರಿಂದಾಗಿ ಸರ್ಕಾರಕ್ಕೆ ನೇಮಕಾತಿಯಲ್ಲಿ ಹೆಚ್ಚಿನ ಅಧಿಕಾರ ದೊರೆಯುತ್ತದೆ ಎನ್ನಲಾಗಿದೆ.

ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಹಿರಿಯ ನಾಯಕ ಎಲ್‌,ಕೆ ಅಡ್ವಾಣಿ ಅವರು  ಪಕ್ಷಪಾತ ನಿಲುವುಗಳನ್ನು ತಪ್ಪಿಸುವ ದೃಷ್ಟಿಯಿಂದ ಸಾಂವಿಧಾನಿಕ ಸಂಸ್ಥೆಗಳಗೆ ದ್ವಿಪಕ್ಷೀಯ ರೀತಿಯಲ್ಲಿ ನೇಮಕಾತಿ ನಡೆಯಬೇಕು ಎಂದು ಯುಪಿಎ ಸರ್ಕಾರವನ್ನು ಒತ್ತಾಯಿಸಿದ್ದರು.2012 ಜೂನ್‌ ರಂದು ಆಗಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಅಡ್ವಾಣಿ ಬರೆದಿದ್ದ ಪತ್ರವನ್ನು ಜೈರಾಮ್‌ ರಮೇಶ್‌ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಸೌಜನ್ಯ ಪ್ರಕರಣ: ವಿಶೇಷ ತನಿಖೆಗೆ ಒತ್ತಾಯಿಸಿ ಆಗಷ್ಟ್‌ 28 ರಂದು ಚಲೋ ಬೆಳ್ತಂಗಡಿ ಮಹಾಧರಣಿ

ಆಯ್ಕೆ ಸಮಿತಿಯಲ್ಲಿ ಪ್ರಧಾನ ಮಂತ್ರಿ ಮಾತ್ರವಲ್ಲದೆ ಸಿಜೆಐ ಮತ್ತು ಉಭಯ ಸದನಗಳ ವಿರೋಧ ಪಕ್ಷದ ನಾಯಕರೂ ಇರಬೇಕು ಎಂಬ ಪ್ರಸ್ತಾವನೆಯನ್ನು ಅಡ್ವಾಣಿ ಅವರು ಈ ಹಿಂದೆಯೇ ಪ್ರಸ್ತಾಪಿಸಿದ್ದರು ಎಂದು ಉಲ್ಲೇಖಿಸಿ ಕೇಂದ್ರದ ವಿರುದ್ಧ ಟೀಕಿಸಿದ್ದಾರೆ.

ಜೈರಾಮ್‌ ರಮೇಶ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಮುಖ್ಯ ಚುನಾವಣೆ ಆಯುಕ್ತ ಮತ್ತು ಇತರ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಕೇಂದ್ರದ ಮಸೂದೆಯು ಆಯುಕ್ತರ ಆಯ್ಕೆ ಸಮಿತಿಯಲ್ಲಿ 2:1ರ ಅನುಪಾತದೊಂದಿಗೆ ಕಾರ್ಯನಿರ್ವಾಹಕ ಹಸ್ತಕ್ಷೇಪವನ್ನು ಖಚಿತಪಡಿಸುತ್ತದೆ.ಚುನಾವಣಾ ವರ್ಷದಲ್ಲಿ ಮಂಡಿಸಿರುವ ಈ ಮಸೂದೆಯು ಚುನಾವಣಾ ಆಯೋಗದ ಮೇಲಿನ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳುವ ಪ್ರಧಾನಿ ಮೋದಿ ಅವರ ಬಯಕೆಯನ್ನು ದೃಢಪಡಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *