ಮಣಿಪುರ ವಿಷಯದಲ್ಲಿ ಮೋದಿಯವರೇ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ:ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ಮಣಿಪುರ ಹಿಂಸಾಚಾರದಲ್ಲಿ ಮೇ 4ರಂದು ನಡೆದ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ ಕೃತ್ಯವನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.ಮಣಿಪುರದಲ್ಲಿ ಮನುಷ್ಯತ್ವ ಎನ್ನುವುದು ಸತ್ತು ಹೋಗಿದೆ ಎಂದು ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸರ್ಕಾರಕ್ಕೆ ಸ್ವಲ್ಪ ಆತ್ಮಸಾಕ್ಷಿ ನಾಚಿಕೆ ಏನಾದರೂ ಉಳಿದಿದ್ದರೆ ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಮಾತನಾಡಿ.ಇತರರನ್ನು ದೂಷಿಸದೆ ಮಣಿಪುರದಲ್ಲಿ ಏನಾಗಿದೆ ಎಂಬುವುದನ್ನು ನೇರವಾಗಿ ತಿಳಿಸಿ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಮಣಿಪುರ ಹಿಂಸಾಚಾರ | ಯುವತಿಯರ ಬೆತ್ತಲೆ ಮೆರವಣಿಗೆ; ಸಾಮೂಹಿಕ ಅತ್ಯಾಚಾರ

ನೀವು(ಪ್ರಧಾನಿ ಮೋದಿ) ನಿಮ್ಮ ಸಂವಿಧಾನಿಕ ಜವಾಬ್ದಾರಿಯನ್ನು ತ್ಯಜಿಸಿದ್ದೀರಿ ಇಂತಹ ಬಿಕ್ಕಟ್ಟಿನ ಸಮಯದಲ್ಲಿ ನಾವು ಮಣಿಪುರದ ಜನರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಮಹಳೆಯರಿಬ್ಬರ ಬೆತ್ತಲೆ ಮೆರವಣಿಗೆ ಕೃತ್ಯ ಖಂಡಿಸಿ ಅರವಿಂದ್‌ ಕೇಜ್ರಿವಾಲ್‌, ಸ್ಪಾಲಿನ್‌ ,ರಾಹುಲ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರು ಟ್ವೀಟ್‌ ಮಾಡಿದ್ದಾರೆ. ಪ್ರಧಾನಿ ಮೌನವನ್ನು ಪ್ರಶ್ನಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *