ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುವಂತೆ ನಾವು ಒತ್ತಾಯಿಸಿದ್ದರೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ: ಖಾರವಾಗಿ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ

ಚಿತ್ರದುರ್ಗ: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಇಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಮಾತನಾಡಿದರು.

ಇದನ್ನು ಓದಿ : ಬಿಜೆಪಿ, ಮಿತ್ರಪಕ್ಷಗಳನ್ನು ನಿರ್ಣಾಯಕವಾಗಿ ಸೋಲಿಸಿ: ಸಿಪಿಎಂ

ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈ ವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಸಿಎಂ ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುವುದಾಗಿ ಪುನರುಚ್ಚರಿಸಿದರು.

ಇದನ್ನು ನೋಡಿ : “ಸಬ್ ಕಾ ಸಾಥ್, ಸಬ್ ಕಾ ವಿಕಾಸ್” ಎಂದರೆ, ಹಿಂದುತ್ವ ಕೋಮುವಾದ ಘೋಷಣೆಯಾ ಮೋದಿಯವರೆ? ಕೆ.ಎಸ್.ವಿಮಲಾ

Donate Janashakthi Media

Leave a Reply

Your email address will not be published. Required fields are marked *