ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ಅನ್ನು ಕೇಂದ್ರ ಸರ್ಕಾರ ರದ್ದು ಮಾಡುತ್ತಿಲ್ಲ. ಪ್ರಜ್ವಲ್‌ನನ್ನು ಪ್ರಧಾನಿ ನರೇಂದ್ರ ಮೋದಿಯೇ ರಕ್ಷಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ರದ್ದು ಮಾಡಿದರೆ, ಆತ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ, ಆದರೆ ಕೇಂದ್ರ ಸರ್ಕಾರ ಪಾಸ್ಪೋರ್ಟ್ ರದ್ದು ಮಾಡಲು ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿ,ಟ್ವೀಟ್ ಮಾಡಿದೆ.
ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು, ಆದರೆ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಪ್ರಜ್ವಲ್ ರೇವಣ್ಣನನ್ನು ಪ್ರಧಾನಿ ಮೋದಿಯೇ ರಕ್ಷಿಸುತ್ತಿದ್ದಾರೆ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ?
ಮೋದಿಗೆ ಪ್ರಜ್ವಲ್ ರೇವಣ್ಣ “ಕೋಂಪ್ಲೇನ್ ಬಾಯ್” ಏಕೆಂದರೆ ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಿದರೆ ಮೋದಿ ಶಕ್ತಿ ಬರುತ್ತದೆಯಂತೆ! ಇಂತಹ ಕೋಂಪ್ಲೇನ್ ಬಾಯ್‌ಗೆ ಮೋದಿ ಕಷ್ಟ ಕೊಡಬಲ್ಲರೆ! ಎಂದು ಕಾಂಗ್ರೆಸ್ ಟೀಕಿಸಿದೆ.
ಇದನ್ನು ಓದಿ : ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ ಜನತಾ ಪಕ್ಷ
ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ರದ್ದು ಮಾಡಿದರೆ ಆತ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ,ಆದರೆ ಕೇಂದ್ರ ಸರ್ಕಾರ ಪಾಸ್ಪೋರ್ಟ್ ರದ್ದು ಮಾಡಲು ಮುಂದಾಗುತ್ತಿಲ್ಲ. ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೊಟೀಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು, ಆದರೆ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ.
ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೊಟೀಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು, ಆದರೆ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಪ್ರಜ್ವಲ್ ರೇವಣ್ಣನನ್ನು ಪ್ರಧಾನಿ ಮೋದಿಯೇ ರಕ್ಷಿಸುತ್ತಿದ್ದಾರೆ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ? ಎಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನು ನೋಡಿ : 90 ದಿನ ವಿದೇಶದಲ್ಲಿ ಇರ್ತಾರಾ ಪ್ರಜ್ವಲ್ ರೇವಣ‍್ಣ!ಇಂಟರ್ ಪೋಲ್ ಬಂಧಿಸಿ ಭಾರತಕ್ಕೆ ಕರೆ ತರುತ್ತಾ?