ಮಂಡ್ಯ ರೋಡ್‌ ʼಶೋʼಕಿ ಆಯ್ತು, ಇದೀಗ ಮೆಟ್ರೊ ʼಶೋʼ ಗೆ ಮೋದಿ ಸಿದ್ದತೆ!

ಬೆಂಗಳೂರು: ಇದೇ ಮಾ.25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ,‌ ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಸತತವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಲಿರುವ ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀಮಧುಸೂದನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್. ಪುರ- ವೈಟ್‌ಫೀಲ್ಡ್‌ ಮೆಟ್ರೊ ಮಾರ್ಗ ಲೋಕಾರ್ಪಣೆ ಮಾಡಲಿರುವ ಅವರು ಮೆಟ್ರೊದಲ್ಲಿ ಸಂಚರಿಸಲಿದ್ದಾರೆ.

ಇದನ್ನೂ ಓದಿ: ಮೋದಿ ರೋಡ್‌ ʼಶೋʼಕಿಗೆ ಮರಗಳಿಗೆ ಬಿತ್ತು ಕೊಡಲಿ!

ವಿಧಾನಸೌಧ ಮುಂಭಾಗದಲ್ಲಿ ಸ್ಥಾಪಿಸಲಾಗುವ ಬಸವೇಶ್ವರ ಮತ್ತು ಕೆಂಪೇಗೌಡ ಪುತ್ಥಳಿ ಅನಾವರಣಗೊಳಿಸಲು ಇದೇ 27 ಅಥವಾ 29ರಂದು ಮತ್ತೊಮ್ಮೆ ಮೋದಿ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಬಳಿಕ, ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆಯ ದಿನ ಘೋಷಿಸಬಹುದು ಎಂಬ ತರ್ಕವೂ ಇದೆ. ಆದರೆ, ಈ ಪುತ್ಥಳಿಗಳು ಇನ್ನೂ ಸಿದ್ಧವಾಗದೇ ಇರುವುದರಿಂದ 27 ಅಥವಾ 29ರಂದು ಮೋದಿ ಬರುವ ಸಾಧ್ಯತೆ ಕಡಿಮೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆ ಸಮೀಪವಾಗುತ್ತಿರುವ ಹಿನ್ನಲೆ ಬಿಜೆಪಿಯ ರಾಜ್ಯ ಮತ್ತು ಕೇಂದ್ರದ ನಾಯಕರುಗಳು ಸಾಕಷ್ಟು ಕಾರ್ಯಕ್ರಮಗಳ ನೆಪದಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು. ಪೂರ್ಣಗೊಳ್ಳದ ಕಾಮಗಾರಿಗಳನ್ನು ಚುನಾವಣಾ ಲಾಭಕ್ಕಾಗಿ ಉದಾಟಿಸುತ್ತಿರುವುದೂ  ಕೂಡ ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *