ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ ಕೇವಲ 619 ಮತಗಳ ಮುನ್ನಡೆ

ನವದೆಹಲಿ: ಪ್ರಧಾನಿ ಮೋದಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಹಾವು-ಏಣಿ ಆಟ ಮುಂದುವರಿದಿದೆ. ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ ಕೇವಲ 619 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಂಚೆ ಮತ ಎಣಿಕೆ ಆರಂಭವಾದಗಿನಿಂದಲೂ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 4998 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಇದೀಗ ಹಿನ್ನಡೆ ಅನುಭವಿಸಿದ್ದಾರೆ.

ಇದನ್ನೂ ಓದಿ: ಈ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ ಮುನ್ನಡೆ

ಸದ್ಯ ಪ್ರಧಾನಿ ಮೋದಿ 36424 ಮತಗಳನ್ನು ಪಡೆದರೆ, ಕಾಂಗ್ರೆಸ್‍ನ ಅಜಯ್ ರಾಯ್ 35805 ಮತಗಳನ್ನು ಪಡೆದಿದ್ದಾರೆ. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ ಬಿಜೆಪಿ 39, ಎಸ್‍ಪಿ 29, ಕಾಂಗ್ರೆಸ್ 7, ಆರ್‍ಎಲ್‍ಡಿ ಹಾಗೂ ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ನೋಡಿ: ಅಮ್ಮ ಎಂಬ ಭಾವಕ್ಕಿರುವ ಕಸುವು ಅನುಭವಿಸಿಯೇ ಅರಿಯಬೇಕು – ಪ್ರತಾಪ್ ಸಿಂಹJanashakthi Media

Donate Janashakthi Media

Leave a Reply

Your email address will not be published. Required fields are marked *