ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಭೇಟಿಯಾಗಲಿದ್ದಾರೆ. ವ್ಯಾಪಾರ,ಉನ್ನತ ತಂತ್ರಜ್ಞಾನ, ಶುದ್ಧ ಇಂಧನ, ರಕ್ಷಣಾ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಸಹಕಾರ ಪರಿಶೀಲಿ ಸಲಿದ್ದು ಜಾಗತಿಕ ಸವಾಲುಗಳಿಗೆ ಪರಿಹಾರಕ್ಕೆ ಉಭಯ ದೇಶಗಳ ಕೊಡುಗೆ ಕುರಿತು ಚರ್ಚಿಸುವರು.ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರ ಪಾಲುದಾರಿಕೆ ಸದೃಢಗೊಳಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಮಾರಿಷಸ್‌ನ ಪ್ರಧಾನಿ ಪ್ರವಿಂದ್ ಜುಗ್‌ನೌತ್ ಜೊತೆಗೂ ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.
ಇದನ್ನೂ ಓದಿ:ಜಿ20 ಶೃಂಗಸಭೆ | ಬಡತನವನ್ನು ಪ್ಲಾಸ್ಟಿಕ್ ಹಾಕಿ ಮುಚ್ಚುತ್ತಿರುವ ಕೇಂದ್ರ ಸರ್ಕಾರ!
2020 ಫೆಬ್ರುವರಿಯಲ್ಲಿ ಆಗ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದರು. ಜಿ20 ಶೃಂಗಸಭೆಗಾಗಿ ಬೈಡನ್ ಆಗಮಿಸುತ್ತಿದ್ದಾರೆ. ಅಧ್ಯಕ್ಷರಾಗಿ ಇದು ಭಾರತಕ್ಕೆ ಅವರ ಮೊದಲ ಭೇಟಿ. ಬೈಡನ್ ಭಾನುವಾರ ಇಲ್ಲಿಂದ ವಿಯೆಟ್ನಾಂಗೆ ತೆರಳಲಿದ್ದಾರೆ.
ವೀಸಾ ಅವಧಿ ಇನ್ನಷ್ಟು ಮುಕ್ತಗೊಳಿಸುವುದು ಸಹಭಾಗಿತ್ವದಲ್ಲಿ ಸಣ್ಣ ಮಾಡುಲರ್ ರಿಯಾಕ್ಟರ್ ತಂತ್ರಜ್ಞಾನದ ಅಭಿವೃದ್ಧಿ ಕುರಿತು ಹಿಂದೆ ವಾಷಿಂಗನ್‌ನಲ್ಲಿ ನಡೆದಿದ್ದ ಸಭೆಯಲ್ಲಿ ಉಭಯ ಮುಖಂಡರು ಚರ್ಚಿಸಿದ್ದರು. ಶುಕ್ರವಾರ ಈ ವಿಷಯ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.