ಚಿಕ್ಕಮಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟಿಸಲು ಕಾಂಗ್ರೆಸ್ ಪಕ್ಷದ ಕಿಸಾನ್ ಕಾರ್ಯಕರ್ತರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದವರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಇಂದು (ಜೂನ್ 20) ಬೆಳಿಗ್ಗೆ ಚಿಕ್ಕಮಗಳೂರಿನ ನಿರೀಕ್ಷಣಾ ಪ್ರವಾಸಿ ಮಂದಿರದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಂಧನಕ್ಕೊಳಗಾಗುವ ಸಂದರ್ಭದಲ್ಲಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮೋದಿ ವಿರುದ್ಧ ಘೋಷಣೆ ಕೂಗಲು ಸಿದ್ಧತೆ ಕಾಂಗ್ರೆಸ್ ಕಾರ್ಯಕರ್ತರು ಮಾಡಿಕೊಂಡಿದ್ದರು. ಈ ಸಂಬಂಧ ಚಿಕ್ಕಮಗಳೂರಿನ ಕೆಪಿಸಿಸಿ ಕಿಸಾನ್ ವಿಭಾಗದ ಅಧ್ಯಕ್ಷ ಸೇರಿದಂತೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಮಾಹಿತಿ ಆಧಾರದ ಮೇಲೆ ಪೊಲೀಸರು, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ(ಇಡಿ)ವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ದೇಶದೆಲ್ಲೆಡೆ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯುವೆ. ಚಿಕ್ಕಮಗಳೂರಿನ ಕಾರ್ಯಕರ್ತರು ಇಂದು ಬೆಂಗಳೂರಿಗೆ ತೆರಳಿ ಪ್ರಧಾನಿ ಮೋದಿ ಅವರನ್ನು ಮುತ್ತಿಗೆ ಹಾಕಬೇಕೆಂದುಕೊಂಡಿದ್ದರು.