ಕೋಲ್ಕತ್ತ: ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಅವರಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ, ಶಮಿ ಅವರು ರಾಜ್‌ಕೋಟ್‌ನಲ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಂಗಾಳ ತಂಡವನ್ನು ಪ್ರತಿನಿಧಿಸುತ್ತಿರುವುದರಿಂದ ವಿಚಾರಣೆಗೆ ಹಾಜರಾಗಿರಲಿಲ್ಲ. ಸೋಮವಾರ ಜಾದವ್‌ಪುರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಮಿ ಮತ್ತು ಅವರ ಸಹೋದರ ಮೊಹಮ್ಮದ್ ಕೈಫ್ ಅವರಿಗೆ ಸೂಚಿಸಲಾಗಿತ್ತು.
ಇದನ್ನೂ ಓದಿ : ಪುಣೆ| ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ನಿಧನ
‘ಬೇರೆ ದಿನದಂದು ವಿಚಾರಣೆಗೆ ಹಾಜರಾಗುವುದಾಗಿ ಚುನಾವಣಾ ಆಯೋಗಕ್ಕೆ ಶಮಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜನವರಿ 9ರಿಂದ 11ರೊಳಗೆ ವಿಚಾರಣೆಗೆ ಹಾಜರಾಗುವಂತೆ ದಿನಾಂಕ ಮರು ನಿಗದಿ ಮಾಡಲಾಗಿದೆ’ ಎಂದು ಅಧಿಕಾರಿ ವಿವರಿಸಿದ್ದಾರೆ.
ಕ್ರಿಕೆಟ್ ವೃತ್ತಿಜೀವನದ ಕಾರಣದಿಂದಾಗಿ ಉತ್ತರ ಪ್ರದೇಶ ಮೂಲದ ಶಮಿ ಅವರು ಹಲವು ವರ್ಷಗಳಿಂದ ಕೋಲ್ಕತ್ತದಲ್ಲಿ ವಾಸಿಸುತ್ತಿದ್ದು, ಕೋಲ್ಕತ್ತ ಮಹಾನಗರ ಪಾಲಿಕೆಯ ವಾರ್ಡ್ 93ರ ಮತದಾರರಾಗಿದ್ದಾರೆ.
‘ಗಣತಿ ನಮೂನೆಯನ್ನು ಶಮಿ ಮತ್ತು ಅವರ ಸಹೋದರ ತಪ್ಪಾಗಿ ಭರ್ತಿ ಮಾಡಿದ್ದಾರೆ. ಅದಕ್ಕಾಗಿಯೇ ಅವರನ್ನು ವಿಚಾರಣೆಗೆ ಕರೆಯಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.
ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಮತದಾರರ ಕರಡು ಪಟ್ಟಿಯನ್ನು 2025ರ ಡಿ.16ರಂದು ಪ್ರಕಟಿಸಿತ್ತು. 58 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ಅಳಿಸಿಹಾಕಿತ್ತು.
ಇದನ್ನೂ ನೋಡಿ : ವೆನೆಜುವೆಲಾ | ಅಮೆರಿಕ ಪುಂಡಾಟವನ್ನು ಖಂಡಿಸಿ ಭಾರತದಾದ್ಯಂತ ಪ್ರತಿಭಟನೆ Janashakthi Media
