ಬೆಂಗಳೂರು: ಮೂಡಬಿದರೆಯ 49 ವರ್ಷದ ಪ್ರೌಢಶಾಲೆ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಬೆಳ್ತಂಗಡಿ ಮೂಲದ ಗುರುವ ಮೊಗೇರ ಶಿಕ್ಷೆಗೊಳಗಾದ ವ್ಯಕ್ತಿ. ಈ ವರ್ಷದ ಫೆಬ್ರವರಿಯಲ್ಲಿ 10 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕರು ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ಇಬ್ಬರು ಹೆಣ್ಣು ಮಕ್ಕಳ ತಂದೆಯಾಗಿರುವ ಆರೋಪಿ ವಿದ್ಯಾರ್ಥಿನಿಯರನ್ನು ಸ್ಟಾಫ್ ರೂಮ್ ಹೊರತುಪಡಿಸಿ ಬೇರೆ ಬೇರೆ ಕೋಣೆಗೆ ಕರೆಸಿ, ಹೋಮ್ ವರ್ಕ್ ನ್ನು ಪರೀಕ್ಷಿಸುತ್ತಿದ್ದರು ಅಷ್ಟೇ ಅಲ್ಲದೇ ಪಾಠದ ಬಗ್ಗೆ ಅನುಮಾನಗಳನ್ನು ಪರಿಹರಿಸಿಕೊಳ್ಳುವಂತೆ ಕೇಳುತ್ತಿದ್ದರು. ಫೆಬ್ರವರಿ 22ರಂದು ಸಂತ್ರಸ್ತೆಯನ್ನು ಶಾಲೆಯ ಕೊಠಡಿಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಇದನ್ನು ಓದಿ : ರಾಜಸ್ಥಾನ| ಬಸ್ ಹಾಗೂ ಟೆಂಪೋ ಡಿಕ್ಕಿ- 11 ಮಂದಿ ಸ್ಥಳದಲ್ಲೇ ಸಾವು
ಶಾಲೆಯ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಆಧಾರದ ಮೇಲೆ, ಈ ವರ್ಷ ಮಾರ್ಚ್ 12 ರಂದು ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 10, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶಿವರುದ್ರಮ್ಮ ಎಸ್ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಮತ್ತು ಎಫ್‌ಟಿಎಸ್‌ಸಿ 1 ನ್ಯಾಯಾಲಯದ ನ್ಯಾಯಾಧೀಶರಾದ ಡಿ ವಿನಯ್ ವ್ಯಕ್ತಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಐದು ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು 10,000 ರೂ ದಂಡ ವಿಧಿಸಿದ್ದು, ಸಂತ್ರಸ್ತೆಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಹನಾದೇವಿ ಬೋಳೂರು ಸಂತ್ರಸ್ತೆಯ ಪರ ವಾದ ಮಂಡಿಸಿದರು.
ಇದನ್ನು ನೋಡಿ : ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸನ್ಮಾನ – ಸರ್ಕಾರ ಅವರ ಜಾಮೀನು ರದ್ದು ಪಡಿಸಲಿ – ಬಿಟಿ ವೆಂಕಟೇಶ್