ಬೆಂಗಳೂರು: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಾಲಾ ಮಕ್ಕಳ ಬೈಸಿಕಲ್ ಯೋಜನೆಗೆ ಮರು ಜೀವ ಬಂದಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆಗೆ ಕ್ರಮ ವಹಿಸುವ ಭರವಸೆ ನೀಡಿದಕ್ಕೆ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಸ್ವಾಗತಿಸಿದೆ. ವಿತರಣೆ
ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ- ನೆರೆ ಹೊರೆಯ ಸಮಾನ ಶಾಲೆಯಾಗಲಿ ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯು ಜುಲೈ 11 ರಂದು ರಾಜ್ಯ ಸಚಿವರಿಗೆ ಮನವಿ ಸಲ್ಲಿಸಿತ್ತು. ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಆ ವೇಳೆ ಭರವಸೆಯನ್ನು ನೀಡಿದ್ದರು.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪನವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಸಭಾ ಅಧಿವೇಶನದ ಸದನದಲ್ಲಿ ಬಂದ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಮಕ್ಕಳಿಗೆ ಮುಂದಿನ ವರ್ಷದಿಂದ ಬೈಸಿಕಲ್ ನೀಡುವುದಾಗಿ ಭರವಸೆ ನೀಡಿದ್ದಾರೆ . ಸ್ಥಗಿತಗೊಂಡಿರುವ ಯೋಜನೆಯನ್ನು ಪುನರಾರಂಭಿಸುವ ಸಚಿವರ ಭರವಸೆ ಸ್ವಾಗತಾರ್ಹ. ಅದೇ ರೀತಿಯಲ್ಲಿ ಉಳಿದ ಉತ್ತೇಜಕಗಳು ಸಕಾಲಕ್ಕೆ ದೊರೆಯುವಂತೆ ಕ್ರಮವಹಿಸುವುದು ಕೂಡ ಆದ್ಯತೆಯ ವಿಷಯವಾಗಬೇಕು ಎಂದು ರಾಜ್ಯ ಸಮಿತಿ ಪ್ರಕಟಣೆ ಮೂಲಕ ತಿಳಿಸಿದೆ.
ಇದನ್ನೂ ಓದಿ:ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ- ನೆರೆ ಹೊರೆಯ ಸಮಾನ ಶಾಲೆಯಾಗಲಿ
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸಾಕಷ್ಟು ವಿಚಾರಗಳ ಕುರಿತು ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಡಿ7 ಗುರುವಾರ ಸದನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ ಕುರಿತು ಚರ್ಚೆ ನಡೆಯಿತು. ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ಭರವಸೆ ನೀಡಿದ್ದಾರೆ.
ಶಾಲಾ ಶಿಕ್ಷಣದಲ್ಲಿ ಕೇಂದ್ರ ಬಿಂದು ಮಕ್ಕಳು ಹಾಗೂ ಮಕ್ಕಳ ಕಲಿಕೆ, ಮಕ್ಕಳಿಗಿರುವ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ಒದಗಿಸಬೇಕಾದ ಉತ್ತೇಜಕಗಳು, ಕಲಿಯಲು ಅಗತ್ಯವಾದ ಮೂಲ ಸೌಕರ್ಯ ಹಾಗೂ ಕಲಿಸಲು ಬೇಕಾದ ಅರ್ಹ ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕಾಗುತ್ತದೆ ಎಂದರು.
ರಾಜ್ಯದಲ್ಲಿ, ಹಲವು ವರ್ಷಗಳಿಂದ ಶಾಲೆ ಪ್ರಾರಂಭವಾಗಿ ಹಲವು ತಿಂಗಳು ಕಳೆದರೂ , ಮಕ್ಕಳಿಗೆ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, ಸಮವಸ್ತ್ರ ಮತ್ತು ಷೂ ಹಾಗೂ ಸಾಕ್ಸ್ ಸಕಾಲಕ್ಕೆ ದೊರೆತಿಲ್ಲ. ಜೊತೆಗೆ, ಏಳನೇ ತರಗತಿಯಿಂದ ಎಂಟು ಅಥವಾ ಎಂಟರಿಂದ ಒಂಭತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಕಳೆದ ಮೂರು ವರ್ಷದಿಂದ ಉಚಿತ ಬೈಸಿಕಲ್ ಸಿಕ್ಕಿಲ್ಲ ಎಂದು ಆರೋಪಿಸಿದರು.
ಇದನ್ನೂಓದಿ:ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸಿ ಹೊಸ ಶಿಕ್ಷಣ ನೀತಿ: ಬಜೆಟ್ ನಲ್ಲಿ ಸಿಎಂ ಘೋಷಣೆ
ಮಾನ್ಯ ಸಚಿವರು ಮಕ್ಕಳ ಕಲಿಕೆಗೆ ಪೂರಕವಾಗಿರುವ ಈ ಕೆಳಗಿನ ವಿಷಯಗಳ ಬಗ್ಗೆ ಆದ್ಯತೆಯ ಮೇಲೆ ಗಮನ ಹರಿಸಿ, ಮುಂದಿನ ಶೈಕ್ಷಣಿಕ ವರ್ಷ 2024-25 ರಿಂದಲಾದರೂ ಈ ಕೆಳಗಿನ ಎಲ್ಲಾ ಉತ್ತೇಜಕಗಳನ್ನು ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಒದಗಿಸಬೇಕೆಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯಿಂದ ಒತ್ತಾಯಿಸುತ್ತವೆ ಎಂದು ಮಹಾ ಪೋಷಕರು ಹಾಗು ಅಭಿವೃದ್ಧಿ ಶಿಕ್ಷಣ ತಜ್ಞರು ಪ್ರೊ.(ಡಾ.)ನಿರಂಜನಾರಾಧ್ಯ ವಿ ಪಿ ತಿಳಿಸಿದ್ದಾರೆ.
ವಿಡಿಯೋ ನೋಡಿ:ಕೊಡಗು : ಹಾಡಿ ಜನರಿಗೆ ಬದುಕಿನ ಗ್ಯಾರಂಟಿ ಬೇಕಿದೆ Janashakthi Media