ಹೆಚ್ಚುವರಿ ಹಣ ಬೇಕಾದರೆ ಪ್ರಕರಣ ಹಿಂಪಡೆಯಿರಿ – ಕೇರಳಕ್ಕೆ ಕೇಂದ್ರ ಸರ್ಕಾರ

ತಿರುವನಂತಪುರಂ: ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧದ ಪ್ರಕರಣವನ್ನು ಹಿಂಪಡೆದರೆ ಕೇರಳದ ಪ್ರಸ್ತುತ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿಯಾಗಿ 11,731 ಕೋಟಿ ರೂ.ಗಳ ಸಾಲವನ್ನು ಪಡೆಯಲು ಕೇರಳಕ್ಕೆ ಅವಕಾಶ ನೀಡುವ ಬಗ್ಗೆ ಪರಿಗಣಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ. ಹಣ

ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಈ ‘ಷರತ್ತನ್ನು’ ರವಾನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರದ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ಹೇಳಿದೆ. ಕೇರಳವು ಸುಮಾರು 17,000 ಕೋಟಿ ರೂ.ಗಳಿಗೆ ಅರ್ಹವಾಗಿದೆ ಎಂದು ಹೇಳಿಕೊಂಡಿದೆ. ಹಣ

ಇದನ್ನೂ ಓದಿ:ತೆಲಂಗಾಣ | ಕಂಪೆನಿ ತೊರೆದ ದಲಿತ ಉದ್ಯೋಗಿಗಳಿಗೆ ಬೆಲ್ಟ್ ಮತ್ತು ಟೈರ್ ಟ್ಯೂಬ್‌ಗಳಿಂದ ತೀವ್ರ ಥಳಿತ

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇರಳ ಸರ್ಕಾರವು ರಾಜ್ಯವು ಸಾಲ ಪಡೆಯಬಹುದಾದ ಹೆಚ್ಚುವರಿ ಹಣವನ್ನು ಮಿತಿಗೊಳಿಸುವ ಕೇಂದ್ರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವು ಹಣಕಾಸಿನ ಒಕ್ಕೂಟದ ತತ್ವಗಳನ್ನು ಉಲ್ಲಂಘಿಸಿದೆ ಎಂದು ಕೇರಳ ಸರ್ಕಾರ ಆರೋಪಿಸಿದೆ. ಕೇಂದ್ರ ಸರ್ಕಾರದ ಕ್ರಮವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ರಾಜ್ಯವು ಅರ್ಜಿಯಲ್ಲಿ ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ಕೇರಳಕ್ಕೆ 47,762.58 ಕೋಟಿ ರೂ.ಗಳ ಸಾಲದ ಮಿತಿಯನ್ನು ನಿಗದಿಪಡಿಸಿದೆ. ಈ ಪೈಕಿ 29,136.71 ಕೋಟಿ ರೂ.ಗಳನ್ನು ಮುಕ್ತ ಮಾರುಕಟ್ಟೆ ಸಾಲ ಮತ್ತು ಉಳಿದವು ಇತರ ಮೂಲಗಳಿಂದ ಪಡೆದಿದೆ. ಆದರೆ, ಹಣಕಾಸಿನ ಜವಾಬ್ದಾರಿಗಳನ್ನು ಪೂರೈಸಲು 26,000 ಕೋಟಿ ರೂ ಹೆಚ್ಚುವರಿ ಸಾಲವನ್ನು ಅನುಮತಿಸಲು ರಾಜ್ಯವು ಕೇಂದ್ರ ಸರ್ಕಾರವನ್ನು ವಿನಂತಿಸಿತ್ತು ಎಂದು ಲೈವ್ ಲಾ ವರದಿ ಮಾಡಿದೆ.

ಇದನ್ನೂ ಓದಿ:‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ | ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ ಬಿಜೆಪಿ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರತಿನಿಧಿಗಳು ಫೆಬ್ರವರಿ 15 ರಂದು ಈ ಬಗ್ಗೆ ಚರ್ಚಿಸಲು ಸಭೆ ನಡೆಸಿದ್ದಾರೆ.  ಆದರೆ ಈ ಚರ್ಚೆ ಯಶಸ್ವಿಯಾಗಲಿಲ್ಲ ಎಂದು ಕೇರಳ ಸರ್ಕಾರದ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಹೇಳಿದ್ದು, ಕೇಂದ್ರದ ಪ್ರಸ್ತಾವನೆಯನ್ನು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಫೆಬ್ರುವರಿ 8 ರಂದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇರಳ ಸರ್ಕಾರವು ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹೇರಿರುವ ಆರ್ಥಿಕ ನಿರ್ಬಂಧಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆಯನ್ನು ಆಯೋಜಿಸಿತ್ತು. ಕೇಂದ್ರ ಈ ನಡೆಯು ಪ್ರಜಾಪ್ರಭುತ್ವ ಮತ್ತು ಒಕ್ಕೂಟವನ್ನು ನಾಶಪಡಿಸುತ್ತಿವೆ ಎಂದು ಅವರು ಆರೋಪಿಸಿದ್ದರು. ಈ ಕಾರ್ಯಕ್ರಮಕ್ಕೆ ರಾಜಕೀಯ ವಲಯದಾದ್ಯಂತ ಹಲವು ಪಕ್ಷಗಳಿಂದ ಬೆಂಬಲ ನೀಡಿತ್ತು.

ವಿಡಿಯೊ ನೋಡಿ: ಸೆಕ್ಯೂಲರಿಸಂ ಹಾಗೂ ಸೊಶಿಯಲಿಸಂ ಬೆಸದಾಗ ಮಾತ್ರ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ – ಡಾ. ಪ್ರಕಾಶ್

Donate Janashakthi Media

Leave a Reply

Your email address will not be published. Required fields are marked *