ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19ರಿಂದ ಆರಂಭ

ನವದೆಹಲಿ: ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಜುಲೈ19 ರಿಂದ ಪ್ರಾರಂಭವಾಗಿ ಆಗಸ್ಟ್ 13 ರಂದು ಮುಕ್ತಾಯವಾಗಲಿದೆ ಎಂದು ಪ್ರಕಟಣೆ ಹೊರಬಿದ್ದಿದೆ. 17 ನೇ ಲೋಕಸಭೆಯ ಆರನೇ ಅಧಿವೇಶನ ಇದಾಗಲಿದ್ದು ಸರ್ಕಾರಿ ವ್ಯವಹಾರದ ಅಗತ್ಯತೆಗಳನ್ನು ಪೂರೈಸುವುದರೊಂದಿಗೆ ಅಂತಿಮವಾಗಿ ಆಗಸ್ಟ್ 13 ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಲೋಕಸಭಾ ಪ್ರಕಟಣೆ ತಿಳಿಸಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜುಲೈ 19 ರಂದು ಸದನವನ್ನು ಕರೆದಿದ್ದು, ಅಧಿವೇಶನ ಆಗಸ್ಟ್ 13ರವರೆಗೂ ಮುಂದುವರೆಯಲಿದೆ ಎಂದು ರಾಜ್ಯಸಭೆಯೂ ಸಹ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದೆ.

ಇದನ್ನು ಓದಿ: ಬಿಜೆಪಿ ಪಕ್ಷದಲ್ಲಿ ಮತ್ತೆ ಎದುರಾದ ನಾಯಕತ್ವ ಬಿಕ್ಕಟ್ಟು: ಉತ್ತರಾಖಂಡ ಮುಖ್ಯಮಂತ್ರಿ ರಾಜೀನಾಮೆ

ಮುಂಗಾರು ಅಧಿವೇಶನ ನಡೆಸುವ ಬಗ್ಗೆ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಪಿಎ) ದಿನಾಂಕಗಳನ್ನು ಶಿಫಾರಸು ಮಾಡಿತ್ತು. ಮೇ 2ರಂದು ಮುಕ್ತಾಯಗೊಂಡು ಐದು ರಾಜ್ಯಗಳಾದ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು , ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ನಂತರ ಇದು ಮೊದಲ ಸಂಸತ್ ಅಧಿವೇಶನವಾಗಿದೆ.

ಕೋವಿಡ್ -19 ಸಾಂಕ್ರಾಮಿಕದ ಪರಿಣಾಮವಾಗಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಮುಂಗಾರು ಅಧಿವೇಶನ ನಡೆದಿತ್ತು. ಆದರೆ, ಚಳಿಗಾಲದ ಅಧಿವೇಶನ ನಡೆದಿರಲಿಲ್ಲ.

ಈಗಾಗಲೇ ಪ್ರಧಾನಿ ನರೇಂದ್ರಮೋದಿ ಅವರು ಕೋವಿಡ್‌ ವಿರುದ್ಧ ಹೋರಾಟದಲ್ಲಿ ಸರಕಾರದ ಪಾತ್ರಗಳ ಬಗ್ಗೆ ವಿರೋಧ ಪಕ್ಷಗಳ ಪ್ರಶ್ನೆಗಳಿ ಸಮರ್ಪಕವಾಗಿ ಉತ್ತರಿಸುವಂತೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಸಚಿವರಿಗೆ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯ ಹಿರಿಯರಿಗೆ ಸಚಿವ ಸ್ಥಾನ ಸಿಗಲಿ: ಸಂಸದ ಪ್ರತಾಪ್‌ ಸಿಂಹ

ಮುಂಗಾರು ಅಧಿವೇಶನದಲ್ಲಿ ಬಿಜೆಪಿ ಕೇಂದ್ರ ಸರಕಾರದ ನೀತಿಗಳ ವಿರುದ್ಧ ವಿರೋಧ ಪಕ್ಷಗಳು ಅಧಿವೇಶನದಲ್ಲಿ ಬದಲಿಸಲಾಗುತ್ತಿರುವ ಅತ್ಯಂತ ಪ್ರಮುಖ ವಿಚಾರಗಳನ್ನು ಕೈಗೆತ್ತಿಕೊಂಡು ಚರ್ಚಿಸಲು ಮುಂದಾಗಿದೆ.

ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪ್ರಕಟಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *